ಕೇರಳದಲ್ಲಿ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ; ಎಡಪಂಥೀಯ ಕಾರ್ಯಕರ್ತರ ಮೇಲೆ ಪೊಲೀಸರ ಶಂಕೆ
ಕೇರಳದಲ್ಲಿ ಯೂತ್ ಕಾಂಗ್ರೆಸ್ ಮುಂಖಡನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಗೈದಿದ್ದು, ಎಡಪಂಥೀಯ ಕಾರ್ಯಕರ್ತರ ಮೇಲೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Published On :
ತಿರುವನಂತಪುರಂ: ಕೇರಳದಲ್ಲಿ ಯೂತ್ ಕಾಂಗ್ರೆಸ್ ಮುಂಖಡನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಗೈದಿದ್ದು, ಎಡಪಂಥೀಯ ಕಾರ್ಯಕರ್ತರ ಮೇಲೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕೇರಳದ ಕಣ್ಣೂರಿನಲ್ಲಿ ಹತ್ಯಾ ರಾಜಕೀಯ ಮುಂದುವರೆದಿದ್ದು, ನಿನ್ನೆ ಯೂತ್ ಕಾಂಗ್ರೆಸ್ ಮುಖಂಡ 30 ವರ್ಷದ ಶುಹೈಬ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಗೈದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕಣ್ಣೂರಿನಲ್ಲಿ ಸ್ಥಳೀಯ ಯೂತ್ ಕಾಂಗ್ರೆಸ್ ಮುಖಂಡ ಹಾಗೂ ಆತನ ಮತ್ತೋರ್ವ ಸ್ನೇಹಿತ ಮಾತನಾಡುತ್ತಿದ್ದಾಗ, ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳು ಅವರತ್ತ ನಾಡಬಾಂಬ್ ಎಸೆದು ಬಳಿಕ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ 30 ವರ್ಷದ ಶುಹೈಬ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಅಲ್ಲಿ ಶುಹೈಬ್ ಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ರವಾನೆ ಮಾಡುವಾಗ ಶುಹೈಬ್ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಸಿಕೊಂಡಿರುವ ಕುಣ್ಣೂರು ಪೊಲೀಸರು ಸ್ಥಳೀಯ ಸಿಪಿಐಎಂ ಕಾರ್ಯಕರ್ತರ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೇ ಇದೇ ಕಣ್ಣೂರಿನಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆಗೈಯ್ಯಲಾಗಿತ್ತು. ಈ ವೇಳೆ ಇಲ್ಲಿ ವ್ಯಾಪಕ ಪ್ರತಿಭಟನೆ ಮತ್ತು ಹಿಂಸಾಚಾರ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CrimeಕೊಲೆmurderThiruvananthapuramಅಪರಾಧತಿರುವನಂತಪುರಂKerala policeಕೇರಳ ಪೊಲೀಸ್Kerala Politicsಕೇರಳ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


