ಬೋಫೋರ್ಸ್ ಹಗರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್
64 ಕೋಟಿ ರೂ. ಮೊತ್ತದ ಬೋಪೋರ್ಸ್ ಹಗರಣ ವಿಚಾರಣೆಯನ್ನು ನಡೆಸುತ್ತಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠದ ಸದಸ್ಯರಾದ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ .......

Published On :
ನವದೆಹಲಿ: 64 ಕೋಟಿ ರೂ. ಮೊತ್ತದ ಬೋಪೋರ್ಸ್ ಹಗರಣ ವಿಚಾರಣೆಯನ್ನು ನಡೆಸುತ್ತಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠದ ಸದಸ್ಯರಾದ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ಸ್ವಯಂಪ್ರೇರಣೆಯಿಂದ ಹಿಂದೆ ಸರಿದಿದ್ದಾರೆ.
ತಾವು ಹಗರಣ ಕುರಿತ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಕ್ಕೆ ಕಾರಣವನ್ನು ತಿಳಿಸಲು ಖಾನ್ವಿಲ್ಕರ್ ನಿರಾಕರಿಸಿದ್ದಾರೆ. ಮಾರ್ಚ್ 28ಕ್ಕೆ ಹೊಸತಾಗಿ ರಚನೆಯಾದ ನ್ಯಾಯಪೀಠವು ಬೋಫೋರ್ಸ್ ಹಗರಣ ಸಂಬಂಧ ವಿಚಾರಣೆ ಮುಂದುವರಿಸಲಿದೆ ಎಂದು ಪೀಠದ ಇನ್ನೋರ್ವ ಸದಸ್ಯರಾದ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹೇಳಿದ್ದಾರೆ.
ಮೇ 31, 2005ರಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಬಿಜೆಪಿ ನಾಯಕ ಅಜಯ್ ಅಗರ್ವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು ದೆಹಲಿ ಹೈಕೋರ್ಟ್ ಹಗರಣದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆರೋಪಿಗಳ ವಿರುದ್ಧ ಆರೋಪಗಳನ್ನು ತಳ್ಳಿಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Bofors caseChief Justice Dipak Misraಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾJustice Khanwilkarನ್ಯಾಯಮೂರ್ತಿ ಖಾನ್ವಿಲ್ಕರ್ಬೊಫೋರ್ಸ್ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


