ಛತ್ತೀಸ್ ಗಢದಲ್ಲಿ ಮೂವರು ನಕ್ಸಲರ ಬಂಧನ
ಛತ್ತೀಸ್ ಗಢದ ದಂಗೆ ಪೀಡಿತ ಕೊಂಡಗಾವ್ ಜಿಲ್ಲೆಯಲ್ಲಿ ಮೂವರು ನಕ್ಸಲರನ್ನು ಬಂಧಿಸಿರಿವುದಾಗಿ ಮಂಗಳವಾರ ಪೊಲೀಸರು...

Published On :
ರಾಯಪುರ್: ಛತ್ತೀಸ್ ಗಢದ ದಂಗೆ ಪೀಡಿತ ಕೊಂಡಗಾವ್ ಜಿಲ್ಲೆಯಲ್ಲಿ ಮೂವರು ನಕ್ಸಲರನ್ನು ಬಂಧಿಸಿರಿವುದಾಗಿ ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮೂವರು ನಕ್ಸಲರ ಪೈಕಿ ಓರ್ವ ನಕ್ಸಲನ ತೆಲೆಗೆ ಬಹುಮಾನ ಘೋಷಿಸಲಾಗಿತ್ತು. ನಕ್ಸಲರ ವಿರುದ್ಧ ಐಟಿಬಿಪಿ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಮರ್ದಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಮೂವರು ನಕ್ಸಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ವರ್ ನಾಗ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಬಂಧಿತ ನಕ್ಸಲರು ನಿಲ್ಧಾರ್ ಅಲಿಯಾಸ್ ಗುಡ್ಡು(25), ಗಿನ್ನು(25) ಮತ್ತು ಘಸ್ಸುರಾಮ್(30) ಎಂದು ಗುರುತಿಸಲಾಗಿದೆ.
ಗುಡ್ಡು ತಲೆಗೆ ಮೂರು ಲಕ್ಷ ರುಪಾಯಿ ಬಹುಮಾನ ಘೋಷಿಸಲಾಗಿತ್ತು ಎಂದು ನಾಗ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


