ದೇಶ

ನಾಳೆಯಿಂದ ಮೂರು ದಿನ ಇರಾನ್ ಅಧ್ಯಕ್ಷರ ಭಾರತ ಪ್ರವಾಸ

ಇರಾನ್ ನ ಅಧ್ಯಕ್ಷ ಹಸನ್ ರೌಹಾನಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಹ್ವಾನದ ಮೇರೆಗೆ ನಾಳೆಯಿಂದ ಮೂರು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನಾಳೆಯಿಂದ  ಮೂರು ದಿನ ಇರಾನ್ ಅಧ್ಯಕ್ಷರ ಭಾರತ ಪ್ರವಾಸ
ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಇರಾನ್ ನ ಅಧ್ಯಕ್ಷ ಹಸನ್ ರೌಹಾನಿ ಅವರ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಇರಾನ್ ನ ಅಧ್ಯಕ್ಷ ಹಸನ್  ರೌಹಾನಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಹ್ವಾನದ ಮೇರೆಗೆ  ನಾಳೆಯಿಂದ ಮೂರು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಫೆ. 17 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಂದ ಇರಾನ್ ಅಧ್ಯಕ್ಷ ರೌಹಾನಿ ಅವರಿಗೆ ಬೀಳ್ಕೂಡುಗೆ ಸಮಾರಂಭ ಆಯೋಜಿಸಲಾಗಿದೆ.

 ಪ್ರವಾಸದ ವೇಳೆ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಬಾಂಧವ್ಯ ಪ್ರಗತಿ ಕುರಿತು ಪರಾಮರ್ಶೆ ನಡೆಯಲಿದೆ. ಹಾಗೂ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳಲ್ಲಿನ ಪರಸ್ಪರ ಹಿತಸಕ್ತಿ ವಿನಿಮಯವೂ ನಡೆಯಲಿದೆ.

ಪ್ರಧಾನಮಂತ್ರಿ ನರೇಂದ್ರಮೋದಿ ಮೇ 2016ರಂದು ಇರಾನ್ ಪ್ರವಾಸ ಕೈಗೊಂಡಿದ್ದರು. ದೆಹಲಿಯಲ್ಲಿನ ಅಧಿಕೃತ ಪ್ರವಾಸ ಹೊರತಾಗಿಯೂ ಹಸನ್ ರೌಹಾನಿ ಹೈದ್ರಾಬಾದಿಗೂ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.