ದೆಹಲಿಯಲ್ಲಿ ಶಂಕಿತ ಮುಜಾಹಿದ್ದೀನ್ ಉಗ್ರನ ಬಂಧನ
ದೆಹಲಿ ಪೊಲೀಸರು ಶಂಕಿತ ಭಾರತೀಯ ಮುಜಾಹಿದ್ದೀನ್ ಸಂಘಟನೆಯ ಉಗ್ರನನ್ನು ಬಂಧಿಸಿದ್ದಾರೆ. ಅರಿಜ್ ಖಾನ್ ಬಂಧಿತ ಉಗ್ರನಾಗಿದ್ದು, 2008ರ ಬಾತ್ಲಾ ಹೌಸ್ ಎನ್ ಕೌಂಟರ್ ಪ್ರಕರಣದಲ್ಲೂ ಅವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ : ದೆಹಲಿ ಪೊಲೀಸರು ಶಂಕಿತ ಭಾರತೀಯ ಮುಜಾಹಿದ್ದೀನ್ ಸಂಘಟನೆಯ ಉಗ್ರನನ್ನು ಬಂಧಿಸಿದ್ದಾರೆ. ಅರಿಜ್ ಖಾನ್ ಬಂಧಿತ ಉಗ್ರನಾಗಿದ್ದು, 2008ರ ಬಾತ್ಲಾ ಹೌಸ್ ಎನ್ ಕೌಂಟರ್ ಪ್ರಕರಣದಲ್ಲೂ ಈತನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ಬಾತ್ಲಾ ಹೌಸ್ ನಲ್ಲಿ ಇತರ ನಾಲ್ಕುಮಂದಿಯೊಂದಿಗೆ ವಾಸಿಸುತ್ತಿದ್ದ, ಜಾಮೀಯಾ ನಗರದಲ್ಲಿ 2008 ಸೆಪ್ಟೆಂಬರ್ 19 ರಂದು ನಡೆದಿದ್ದ ಎನ್ ಕೌಂಟರ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ.
ಎನ್ ಕೌಂಟರ್ ವೇಳೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಹಲವು ಮಂದಿಯನ್ನು ಬಂಧಿಸಲಾಗಿತ್ತು, ಕಾರ್ಯಾಚರಣೆ ವೇಳೆ ಇನ್ಸ್ ಪೆಕ್ಟರ್ ಮೋಹನ್ ಚಂದ್ ಶರ್ಮಾ ಕೂಡಾ ಸಾವನ್ನಪ್ಪಿದ್ದರು.
ಬಾತ್ಲಾ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 2013 ರಂದು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಶಹಜಾದ್ ಅಹಮ್ಮದ್ ನಿಗೆ ವಿಚಾರಣಾ ನ್ಯಾಯಾಲಯ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿತ್ತು,ಇದನ್ನು ವಿರೋಧಿಸಿ ಈತ ಹೈಕೋರ್ಟಿಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


