ಮದುವೆ ಸಂಭ್ರಮದ ವೇಳೆ ಫೈರಿಂಗ್ 7 ವರ್ಷದ ಬಾಲಕಿ ಸಾವು
ಮದುವೆ ಸಂಭ್ರಮದ ವೇಳೆ ಫೈರಿಂಗ್ ಮಾಡಿದ್ದು ಗುಂಡು ತಗುಲಿ 7 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ...

Published On :
ಗ್ವಾಲಿಯಾರ್: ಮದುವೆ ಸಂಭ್ರಮದ ವೇಳೆ ಫೈರಿಂಗ್ ಮಾಡಿದ್ದು ಗುಂಡು ತಗುಲಿ 7 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಹಳೆಯ ಗ್ವಾಲಿಯರ್ ನಲ್ಲಿ ಮದುವೆ ಸಂಭ್ರಮದ ವೇಳೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಗುಂಡು ತಗುಲಿ ಏಳು ವರ್ಷದ ಶೀಜಲ್ ಜಡೋನ್ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಮದುವೆ ಕಾರ್ಯಕ್ರಮದ ವೇಳೆ ಚೇರ್ ನಲ್ಲಿ ಕುಳಿತಿದ್ದಾಗ ಗುಂಡು ಆಕೆಯ ಹೊಟ್ಟೆಗೆ ಹೊಕ್ಕಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಎಂಎಂ ಮಾಲ್ವಿಯಾ ಹೇಳಿದ್ದಾರೆ.
ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಲ್ವಿಯಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


