ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಬಿಎಸ್ಪಿ ?
ಕಾಂಗ್ರೆಸ್ ಹಾಗೂ ಬಿಎಸ್ ಪಿ ನಡುವಿನ ಸಂಬಂಧ ಹಳಸಿದ್ದು, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಡನೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಎಂಬಂತಹ ಚರ್ಚೆಗಳು ನಡೆಯುತ್ತಿವೆ.

ನವದೆಹಲಿ : ಕಾಂಗ್ರೆಸ್ ಹಾಗೂ ಬಿಎಸ್ ಪಿ ನಡುವಿನ ಸಂಬಂಧ ಹಳಸಿದ್ದು, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಡನೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಎಂಬಂತಹ ಚರ್ಚೆಗಳು ನಡೆಯುತ್ತಿವೆ.
ಇತ್ತೀಚಿಗೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಬಿಎಸ್ ಪಿ ಗೈರು ಹಾಜರಿ ಕಂಡು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಈ ಅನುಮಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಬಜೆಟ್ ಅಧಿವೇಶನದ ಮೊದಲ ಹಂತದ ವೇಳೆಯಲ್ಲಿ ರಾಜ್ಯಸಭೆಯಲ್ಲಿ ಬಿಎಸ್ ಪಿ ಆಸನಗಳು ಖಾಲಿಯಾಗಿದ್ದವು. ಬಿಎಸ್ ಪಿ ಮುಖಂಡ ಎಸ್ . ಸಿ . ಮಿಶ್ರಾ ಸೇರಿದಂತೆ ಯಾರೊಬ್ಬರೂ ಕಾಣಲಿಲ್ಲ ಎಂದು ಹೇಳಿದರು.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಯಾವತಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ವರಿಷ್ಠ ಹೆಚ್. ಡಿ, ದೇವೇಗೌಡರೊಂದಿಗೆ ಆರು ಸಮಾವೇಶಗಳಲ್ಲಿ ಭಾಷಣ ಮಾಡಲಿದ್ದಾರೆ. ಮಾಯಾವತಿ ಕಾಂಗ್ರೆಸ್ ಗೆ ಪಾಠ ಕಲಿಸಲು ಮುಂದಾಗಿದ್ದಾರೆ ಎಂಬಂತಹ ಮಾತುಗಳು ಬಿಎಸ್ ಪಿ ಮೂಲಗಳಿಂದ ತಿಳಿದುಬಂದಿದೆ.
ಉತ್ತರ ಪ್ರದೇಶ ಚುನಾವಣೆ ವೇಳೆಯಲ್ಲಿ ರಾಹುಲ್ ಗಾಂಧಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಇದರಿಂದಾಗಿ ಅಸಮಾಧಾನಗೊಂಡಿರುವ ಮಾಯಾವತಿ ಮುಂಬರುವ ಲೋಕಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಹಾಗೂ ಬಿಎಸ್ ಪಿ ನಡುವಿನ ಮನಸ್ತಾಪ ಹೀಗೆಯೆ ಮುಂದುವರೆದರೆ ಲೋಕಸಭಾ ಚುನಾವಣೆ ವೇಳೆಯಲ್ಲಿ ಉಭಯ ಪಕ್ಷಗಳಿಗೂ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


