ದೇಶ

ಮಾನನಷ್ಟ ಮೊಕದ್ದಮೆ ವಿಚಾರ: ಪ್ರಕರಣದಿಂದ ಹಿಂದೆ ಸರಿದ ಕೇಜ್ರಿವಾಲ್ ವಕೀಲ

ಹಣಕಾಸು ಸಚಿವ ಅರುಣ್ ಜೇಟ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಕೇಜ್ರಿವಾಲ್ ಪರ ವಕೀಲರು..........

ಮಾನನಷ್ಟ ಮೊಕದ್ದಮೆ ವಿಚಾರ: ಪ್ರಕರಣದಿಂದ ಹಿಂದೆ ಸರಿದ ಕೇಜ್ರಿವಾಲ್ ವಕೀಲ
,ಅರವಿಂದ ಕೇಜ್ರಿವಾಲ್
Published On :
ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಕೇಜ್ರಿವಾಲ್ ಪರ ವಕೀಲರು ತಾನು ಪ್ರಕರಣದ ಪರ ವಾದಿಸುವುದಿಲ್ಲ ಎಂದಿದ್ದಾರೆ.
ಅರವಿಂದ ಕೇಜ್ರಿವಾಲ್ ಪರ ವಕೀಲರಾದ ಅನೂಪ್ ಜಾರ್ಜ್ ಚೌಧರಿ ತಾವಿನ್ನು ಮಾನನಷ್ಟ ಮೊಕದ್ದಮೆ ಪ್ರಕರಣದ ವಾದಮಂಡನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಮುಖಂಡರಾದ ಕುಮಾರ್ ವಿಶ್ವಾಸ್, ಅಶುತೋಷ್, ಸಂಜಯ್ ಸಿಂಗ್, ರಾಘವ್ ಚಧಾ ಮತ್ತು ದೀಪಕ್ ಬಾಜಪೇಯಿ ಅವರ ವಿರುದ್ಧ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಡಿಸೆಂಬರ್ 2015ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಕೇಜ್ರಿವಾಲ್ ಮತ್ತು ಇತರರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ಅನ್ನೊಳಗೊಂಡ ಪ್ರಕರಣದಲ್ಲಿ ಸುಳ್ಳು ಮತ್ತು ಮಾನಹಾನಿಯಾಗುವಂತಹಾ ಹೇಳಿಕೆಗಳನ್ನು ನೀಡಿದ್ದರು ಮತ್ತು ಅವರ ವ್ಯಕ್ತಿತ್ವಕ್ಕೆ ಹಾನಿಯುಂಟು ಮಾಡಿದ್ದಾರೆ ಎಂದು ಮಾನನಷ್ಟ ಮೊಕದ್ದಮೆ ಹೂಡಿದ್ದ  ಜೇಟ್ಲಿ ಹತ್ತು ಕೋಟಿ ರೂ. ಪರಿಹಾರಕ್ಕಾಗಿ ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.