ಉತ್ತರ ಪ್ರದೇಶ ಬಜೆಟ್: ಮೂಲ ಸೌಕರ್ಯ, ರೈತರಿಗೆ, ಧಾರ್ಮಿಕ ಪ್ರವಾಸೋದ್ಯಮಕ್ಕೆ ಯೋಗಿ ಆದ್ಯತೆ
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಶುಕ್ರವಾರ ಮಂಡನೆಯಾಗಿದ್ದು, ಮೂಲಭೂತ ಸೌಕರ್ಯ...

Published On :
ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಶುಕ್ರವಾರ ಮಂಡನೆಯಾಗಿದ್ದು, ಮೂಲಭೂತ ಸೌಕರ್ಯ, ರೈತರಿಗೆ ಹಾಗೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಹಣಕಾಸು ಸಚಿವ ರಾಜೇಶ್ ಅಗರವಾಲ್ ಅವರು ಇಂದು 2018-19ನೇ ಸಾಲಿನ ಬಜೆಟ್ ಮಂಡಿಸಿದರು.
ಉತ್ತರ ಪ್ರದೇಶ ಸರ್ಕಾರ ಒಟ್ಟು 4.28 ಲಕ್ಷ ಕೋಟಿ ರುಪಾಯಿ ಬಜೆಟ್ ನಲ್ಲಿ 14, 341 ಕೋಟಿ ರುಪಾಯಿ ಹೊಸ ಯೋಜನೆಗಳಿಗೆ ಮೀಸಲಿಟ್ಟಿದ್ದು, ರಾಜ್ಯದಲ್ಲಿ ಹೊಸ ರಸ್ತೆಗಳ ನಿರ್ಮಾಣಕ್ಕೆ 11,300 ಕೋಟಿ ರುಪಾಯಿ ನೀಡಲಾಗಿದೆ.
ಮದರಸಾಗಳ ಆಧುನಿಕರಣಕ್ಕಾಗಿ ಅಗರವಾಲ್ ಅವರು ಬಜೆಟ್ ನಲ್ಲಿ 404 ಕೋಟಿ ಅನುದಾನ ಘೋಷಿಸಿದ್ದಾರೆ.
ಇದು ಸಮಗ್ರ ಅಭಿವೃದ್ಧಿ ಬಜೆಟ್ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಆದರೆ ಯಾವುದೇ ಗೊತ್ತು ಗುರಿ ಇಲ್ಲದ. ರೈತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
farmersರೈತರುಮೂಲ ಸೌಕರ್ಯUttar Pradesh budgetinfrareligious tourismಉತ್ತರ ಪ್ರದೇಶ ಬಜೆಟ್ಧಾರ್ಮಿಕ ಪ್ರವಾಸೋದ್ಯಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


