ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ: ಯುಪಿಎ ವಿರುದ್ಧ ಬಿಜೆಪಿ ಆರೋಪ
ಮುಂಬೈಯಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿನ 11.300 ಕೋಟಿ ರೂ. ಹಗರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಾಟಕ್ಕೂ ಕಾರಣವಾಗಿದೆ.

ನವದೆಹಲಿ: ಮುಂಬೈಯಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿನ 11.300 ಕೋಟಿ ರೂ. ಹಗರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಾಟಕ್ಕೂ ಕಾರಣವಾಗಿದೆ.
ಯುಪಿಎ ಸರ್ಕಾರದ ಅವಧಿಯಲ್ಲೂ ಈ ಹಗರಣ ನಡೆದಿತ್ತು ಎಂದು ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಗರಣ ಸಂಬಂಧ ಪ್ರತಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಅವರು ಅಪಾದಿಸಿದರು.ವಿದೇಶದಲ್ಲಿ ತಲೆಮರೆಸಿಕೊಂಡಿರುವ ಈ ಹಗರಣದ ಪ್ರಮುಖ ಆರೋಪಿ ನೀರವ್ ಮೋದಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ನೀರವ್ ಮೋದಿ ದೇಶದಿಂದ ಪಲಾಯನ ಮಾಡಲು ಸರ್ಕಾರ ನೆರವು ನೀಡಿಲ್ಲ. ಶೀಘ್ರದಲ್ಲಿಯೇ ಆತನನ್ನು ಬಂಧಿಸಿ ದೇಶಕ್ಕೆ ಕರೆತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


