ಪಾಕಿಸ್ತಾನಕ್ಕೆ ತೆರಳುವ ಯಾತ್ರಿಕರ ಮೇಲೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ: ವಿದೇಶಾಂಗ ಸಚಿವಾಲಯ
ಪಾಕಿಸ್ತಾನಕ್ಕೆ ತೆರಳುವ ಯಾತ್ರಾರ್ಥಿಗಳ ಮೇಲೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ ಎಂದು ವಿದೇಶಾಂಗ ಸಚಿವಾಲಯ ಶನಿವಾರ ಹೇಳಿದೆ...

Published On :
ನವದೆಹಲಿ: ಪಾಕಿಸ್ತಾನಕ್ಕೆ ತೆರಳುವ ಯಾತ್ರಾರ್ಥಿಗಳ ಮೇಲೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ ಎಂದು ವಿದೇಶಾಂಗ ಸಚಿವಾಲಯ ಶನಿವಾರ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ಉಭಯ ರಾಷ್ಟ್ರಗಳ ನಡುವೆ ವೈಮಸ್ಸು ಎದುರಾಗಿದ್ದು, ಈ ಹಿನ್ನಲೆಯಲ್ಲಿ ಪಾಕಿಸ್ತಾನಕ್ಕೆ ತೆರಳುವ ಯಾತ್ರಾರ್ಥಿಗಳ ಮೇಲೆ ಭಾರತ ನಿರ್ಬಂಧ ಹೇರಿದ್ದು, ರಾಜಧಾನಿ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯಲ್ಲಿರುವ ಯಾತ್ರಾರ್ಥಿಗಳ ವಿಸಾ ಅರ್ಜಿಗಳನ್ನು ಹಿಂಪಡೆಯುತ್ತಿದೆ ಎಂದು ಪಾಕಿಸ್ತಾನ ಆರೋಪ ಮಾಡಿತ್ತು.
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು,ಪಾಕಿಸ್ತಾನಕ್ಕೆ ತೆರಳುವ ಯಾತ್ರಾರ್ಥಿಗಳ ಮೇಲೆ ಭಾರತ ಯಾವುದೇ ರೀತಿಯ ನಿರ್ಬಂಧವನ್ನು ಹೇರಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನನಿರ್ಬಂಧrestrictionವಿದೇಶಾಂಗ ಸಚಿವಾಲಯPilgrimsExternal Affairs Ministryಯಾತ್ರಾರ್ಥಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


