ದೇಶ

ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತ ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅರುಣಾಚಲಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಭಾರತ ತಿರುಗೇಟು ನೀಡಿದ್ದು, ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಶುಕ್ರವಾರ ಹೇಳಿದೆ...

ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತ ತಿರುಗೇಟು
ಸಂಗ್ರಹ ಚಿತ್ರ
Published On :
ನವದೆಹಲಿ; ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅರುಣಾಚಲಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಭಾರತ ತಿರುಗೇಟು ನೀಡಿದ್ದು, ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಶುಕ್ರವಾರ ಹೇಳಿದೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ನಮ್ಮ ನಾಯಕರು ಮತ್ತು ಜನರಿಗೆ ಅರುಣಾಚಲಪ್ರದೇಶಕ್ಕೆ ಹೋಗುವ ಹಕ್ಕಿದೆ ಎಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಅರುಣಾಚಲಪ್ರದೇಶಕ್ಕೆ ಪ್ರಧಾನಮಂತ್ರಿ ಮೋದಿ ಅವರು ಭೇಟಿ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾ, ಚೀನಾ-ಭಾರತ ಗಡಿಯಲ್ಲಿ ಚೀನಾದ ಸ್ಥಾನ ಸ್ಥಿರ ಮತ್ತು ಸ್ಪಷ್ಟವಾಗಿದೆ. ವಿವಾದಿತ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವುದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ ಮತ್ತು ಈ ಕುರಿತು ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಹೇಳಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.