ಪಿಎನ್ ಬಿ ವಂಚನೆ ಪ್ರಕರಣ: ಭಾರತದಲ್ಲಿ ತನಿಖೆ, ಮಲೇಷ್ಯಾದಲ್ಲಿ ಮತ್ತೊಂದು ಆಭರಣ ಶೋರೂಂ ತೆರೆದ ನೀರವ್ ಮೋದಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐನಿಂದ ಲುಕ್ ಔಟ್ ನೋಟಿಸ್ ಪಡೆದಿರುವ ನೀರವ್ ಮೋದಿ ಮಕಾವ್ ಮತ್ತು ಕೌಲಾಲಂಪುರದಲ್ಲಿ ಎರಡು ಆಭರಣ ಶೋರೂಂಗಳನ್ನು ತೆರೆದಿದ್ದಾರೆ. ಇನ್ನು ಈ ಶೋರೂಂಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪಡೆದ ಹಣವೇ ಅಥವೇ ಬೇರೆ ಆದಾಯದ ಮೂಲದ್ದೇ ಎಂಬ ಹಲವು ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಈ ಬಗ್ಗೆಯೂ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪ್ರಸ್ತುತ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiNirav Modiನೀರವ್ ಮೋದಿPunjab National Bank Fraud Caseಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


