ದೇಶ

ಚಹಾ ಹಾಗೂ ಪಕೋಡಾ ಚರ್ಚೆ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಅಖಿಲೇಶ್ ಯಾದವ್

ಬಿಜೆಪಿಯು ಚಹಾ ಹಾಗೂ ಪಕೋಡಾ ಚರ್ಚೆ ಹುಟ್ಟು ಹಾಕುವ ಮೂಲಕ ಜನರ ಗಮನವನ್ನು ಬೇರೆಡೆ ಸಳೆಯಲು ಪ್ರಯತ್ನಿಸುತ್ತದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಚಹಾ ಹಾಗೂ ಪಕೋಡಾ ಚರ್ಚೆ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Published On :
ಲಖನೌ(ಉತ್ತರ ಪ್ರದೇಶ): ಬಿಜೆಪಿಯು ಚಹಾ ಹಾಗೂ ಪಕೋಡಾ ಚರ್ಚೆ ಹುಟ್ಟು ಹಾಕುವ ಮೂಲಕ ಜನರ ಗಮನವನ್ನು ಬೇರೆಡೆ ಸಳೆಯಲು ಪ್ರಯತ್ನಿಸುತ್ತದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಗೋರಖ್ ಪುರ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ದಿನದಿನಕ್ಕೆ ಬಿರುಸುಗೊಳ್ಳುತ್ತಿದೆ. ಲಖನೌನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಖಿಲೇಶ್ ಈ ಚುನಾವಣೆಯಲ್ಲಿ ಗೋರಖ್ ಪುರದ ಜನತೆ ಸಂಪೂರ್ಣ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.
"ಬಿಜೆಪಿ ಕುರಿತಾದ ಸತ್ಯಗಳನ್ನು ಚರ್ಚಿಸಬೇಕಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆಗಳಾಗುವುದನ್ನು ಬಯಸುವುದಿಲ್ಲ. ಅವರು ಕೇವಲ ಚಹಾ ಹಾಗೂ ಪಕೋಡಾಗಳ ಚರ್ಚೆಗೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ." ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಿಜೆಪಿಗೆ ತಿರುಗೇಟು ನೀಡಿದ್ದರು.
ಮಾರ್ಚ್ 11 ರಂದು ಗೋರಖ್ ಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪೀಸ್ ಪಾರ್ಟಿ ಮತ್ತು ನಿಶಾದ್ ಪಾರ್ಟಿಗಳು ಸಮಾಜವಾದಿ ಪಕ್ಷದೊಡನೆ ಕೈಜೋಡಿಸಿರುವ  ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಆಯಾ ಪಕ್ಷಕ್ಕೆ ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.