ಅಗರ್ತಲಾ: ಚಿನ್ನದ ಕಳ್ಳಸಾಗಣೆ ನಡೆಸುತ್ತಿದ್ದ ಬಾಂಗ್ಲಾ ಪ್ರಜೆಯ ಬಂಧನ
39 ಕೆಜಿ ತೂಕದ ಚಿನ್ನದ ಬಾರ್ ಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಬಾಂಗ್ಲಾದೇಶೀ ಪ್ರಜೆಯನ್ನು ಅಗರ್ತಲಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
Published On :
ಅಗರ್ತಲಾ: 39 ಕೆಜಿ ತೂಕದ ಚಿನ್ನದ ಬಾರ್ ಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಬಾಂಗ್ಲಾದೇಶೀ ಪ್ರಜೆಯನ್ನು ಅಗರ್ತಲಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗಳ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಆತನಿಂದ 1302 ಗ್ರಾಂ ತೂಕದ ಕನಿಷ್ಠ 12 ಚಿನ್ನದ ಬಾರ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಆರೋಪಿಯಾದ ಬಾಂಗ್ಲಾ ಪ್ರಜೆಯನ್ನು ಅಬುಲ್ ಕಲಾಮ್ ಆಜಾದ್ ಎಂದು ಗುರುತಿಸಲಾಗಿದೆ.
ಅಗರ್ತಲಾ ವಿಮಾನನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆಯಲ್ಲಿ ಸಿಐಎಸ್ಎಫ್ ಸಿಬ್ಬಂದಿಗಳು ಪ್ರಯಾಣಿಕನು ತನ್ನೊಡನೆ ಚಿನ್ನದ ಗಟ್ಟಿಗಳನ್ನು ಸಾಗಿಸುತ್ತಿದ್ದಾನೆ ಎನ್ನುವುದನ್ನು ಪತ್ತೆ ಮಾಡಿದೆ. ಅಗರ್ತಲಾದಿಂದ ಕೊಲ್ಕತ್ತಾಗೆ ಇಂಡಿಗೊ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕಾಗಿದ್ದ ಅಬುಲ್ ಕಲಾಮ್ ಆಜಾದ್ ಈ ಕೃತ್ಯ ಎಸಗಿದ್ದಾನೆಂದು ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ ಸಂಪೂರ್ಣ ತಪಾಸಣೆಗಾಗಿ ಆರೋಪಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ಯಲಾಯಿತು.
ಹೀಗೆ ತಪಾಸಣೆ ನಡೆಸಿದ ವೇಳೆ ಆರೋಪಿಯು ತನ್ನ ಗುದನಾಳದಲ್ಲಿ ಚಿನ್ನದ ಬಾರ್ ಗಳನ್ನು ಸಾಗಿಸುತ್ತಿದ್ದದ್ದು ಪತ್ತೆಯಾಗಿದೆ.ಇದೀಗ ಆರೋಪಿ ಹಾಗೂ ಚಿನ್ನದ ಬಾರ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Central Industrial Security ForceAgartalaಅಗರ್ತಲಾಕೇಂದ್ರ ಕೈಗಾರಿಕಾ ಭದ್ರತಾ ಪಡೆGold smugglergold barsಚಿನ್ನದ ಕಳ್ಳಸಾಗಣೆದಾರಚಿನ್ನದ ಬಾರ್ ಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

