ಮಾರ್ಚ್ 8ರಂದು ಅಗ್ಗ ದರದ ಸ್ಯಾನಿಟರಿ ನ್ಯಾಪ್ ಕಿನ್ ವಿತರಿಸುವ ಯೋಜನೆಗೆ 'ಮಹಾ' ಸರ್ಕಾರ ಚಾಲನೆ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಾರಾಷ್ಟ್ರ ಸರ್ಕಾರ ಅಸ್ಮಿತಾ ....

Published On :
ಮುಂಬೈ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಾರಾಷ್ಟ್ರ ಸರ್ಕಾರ ಅಸ್ಮಿತಾ ಯೋಜನೆಯನ್ನು ಜಾರಿಗೆ ತರಲಿದ್ದು ಇದರಡಿ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ ಕಿನ್ ನ್ನು ಪ್ರತಿ ಪ್ಯಾಕೆಟ್ ಗೆ 5 ರೂಪಾಯಿ, ಗ್ರಾಮೀಣ ಮಹಿಳೆಯರಿಗೆ 24 ಮತ್ತು 29 ರೂಪಾಯಿಗಳ ಸಬ್ಸಿಡಿ ದರದಲ್ಲಿ ಮಹಾರಾಷ್ಟ್ರ ಸರ್ಕಾರ ನೀಡಲಿದೆ.
ಈ ವಿಷಯವನ್ನು ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.
ಯೋಜನೆ ಆರಂಭ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಾಲಿವುಡ್ ನಟ ಅಕ್ಷಯ್ ಕುಮಾರ್ ಉಪಸ್ಥಿತರಿರುತ್ತಾರೆ. ಅಕ್ಷಯ್ ಕುಮಾರ್ ಅವರ ಇತ್ತೀಚೆಗೆ ತೆರೆಕಂಡ ಪ್ಯಾಡ್ ಮಾನ್ ಚಿತ್ರ ಗ್ರಾಮೀಣ ಮಹಿಳೆಯರಲ್ಲಿ ಋತುಚಕ್ರದ ಬಗ್ಗೆ ಶುಚಿತ್ವ ಮತ್ತು ಅರಿವು ಮೂಡಿಸುವ ಚಿತ್ರಕಥೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Womenಮಹಾರಾಷ್ಟ್ರMaharashtraಮಹಿಳೆಯರುಸ್ಯಾನಿಟರಿ ಪ್ಯಾಡ್periodsಋತುಚಕ್ರSanitary padAsmita schemeಅಸ್ಮಿತಾ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


