ದೇಶ

ಕಾರು ತಡೆದು ಶಾಸಕ ಜಿಗ್ನೇಶ್ ಮೇವಾನಿಯ ಹೊರಗೆಳೆದ ಗುಜರಾತ್ ಪೊಲೀಸರು!

ದಲಿತ ಮುಖಂಡ ಭಾನು ಭಾಯ್ ಅವರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ಪೊಲೀಸರು ಕಾರಿನಿಂದ ಬಲವಂತವಾಗಿ ಎಳೆದು ವಿಚಾರಣೆ ನಡೆಸಿದ ಪ್ರಸಂಗ ವರದಿಯಾಗಿದೆ.

ಕಾರು ತಡೆದು ಶಾಸಕ ಜಿಗ್ನೇಶ್ ಮೇವಾನಿಯ ಹೊರಗೆಳೆದ ಗುಜರಾತ್ ಪೊಲೀಸರು!
ಸಂಗ್ರಹ ಚಿತ್ರ
Published On :
ಅಹ್ಮದಾಬಾದ್: ದಲಿತ ಮುಖಂಡ ಭಾನು ಭಾಯ್ ಅವರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ಪೊಲೀಸರು  ಕಾರಿನಿಂದ ಬಲವಂತವಾಗಿ ಎಳೆದು ವಿಚಾರಣೆ ನಡೆಸಿದ ಪ್ರಸಂಗ ವರದಿಯಾಗಿದೆ.
ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಪಾಲ್ಗೊಳ್ಳಲು ಜಿಗ್ನೇಶ್ ತೆರಳುತ್ತಿದ್ದ ವೇಳೆಯಲ್ಲಿ ಪೊಲೀಸರು ವಡಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು  ಜವಾಹರ್ ಲಾಲ್ ವಿವಿ ವಿದ್ಯಾರ್ಥಿ ಯುನಿಯನ್ ನ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ಟ್ವೀಟ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ಸಭೆಗೆ ತೆರಳುತ್ತಿದ್ದ ವೇಳೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಯವರ  ಕಾರನ್ನು ತಡೆದ ಪೊಲೀಸರು ಜಿಗ್ನೇಶ್ ರನ್ನು ಹೊರಗೆಳೆದಿದ್ದಾರೆ ಎನ್ನಲಾಗಿದೆ. 
"ದಲಿತ ಹುತಾತ್ಮ ಭಾನು ಭಾಯ್ ಅವರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಜಿಗ್ನೇಶ್ ಮೇವಾನಿಯವರನ್ನು ಗುಜರಾತ್ ಪೊಲೀಸರು ತಡೆದಿದ್ದಾರೆ. ಈ ವೇಳೆ  ಜಿಗ್ನೇಶ್ ಅವರನ್ನು ಕಾರಿನಿಂದ ಹೊರಗೆಳೆದಿದ್ದು, ಕಾರಿನ ಕೀಯನ್ನು ಪೊಲೀಸರು ತುಂಡರಿಸಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡು… ಮೊದಲು ಅವರು ದಲಿತರಿಂದ ಭೂಮಿ ಕಸಿದುಕೊಂಡರು. ಆತ್ಮಹತ್ಯೆ ಮಾಡಿಕೊಳ್ಳುವಂತೆ  ಮಾಡಿದರು. ಈಗ ಅವರು ಜನಪ್ರತಿನಿಧಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ” ಎಂದು ಶೆಹ್ಲಾ ರಶೀದ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.