ನೀರವ್ ಮೋದಿ ಬಗೆಗಿನ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲೇಬೇಕು: ಸಿದ್ದರಾಮಯ್ಯ
ನೀರವ್ ಮೋದಿ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ಬೆಂಗಳೂರು: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕರು ಟಾರ್ಗೆಟ್ ಮಾಡುತ್ತಿದ್ದು, ನೀರವ್ ಮೋದಿ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಖಾಸಗಿ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ನೀರವ್ ಮೋದಿ ಕುರಿತ ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲೇಬೇಕು ಎಂದು ಹೇಳಿದ್ದಾರೆ. ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ನನ್ನ ಸರ್ಕಾರದ ಬಗ್ಗೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಈಗ ನೀರವ್ ಮೋದಿ ಪ್ರಕರಣದಲ್ಲಿ ಮೋದಿ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಆದರೆ ಮೋದಿ ಮೌನವಾಗಿದ್ದಾರೆ. ನೀರವ್ ಮೋದಿ ಪ್ರಕರಣ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ಚುನಾವಣಾ ಪ್ರಚಾರದಲ್ಲಿ ಪ್ರಶ್ನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್Siddaramaiahಸಿದ್ದರಾಮಯ್ಯBank Fraud Caseಬ್ಯಾಂಕ್ ವಂಚನೆ ಪ್ರಕರಣNirav Modiನೀರವ್ ಮೋದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


