ಕಳೆದ ಒಂದು ವರ್ಷದಲ್ಲಿ 900 ಹೊಸ ವಿಮಾನಗಳಿಗಾಗಿ ಬೇಡಿಕೆ: ಪ್ರಧಾನಿ ಮೋದಿ
ದೇಶದ ವಿಮಾನಯಾನ ವಲಯ ಅದ್ಭುತವಾದ ಬೆಳವಣಿಗೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published On :
ಮುಂಬೈ: ದೇಶದ ವಿಮಾನಯಾನ ವಲಯ ಅದ್ಭುತವಾದ ಬೆಳವಣಿಗೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ವಿಮಾನಯಾನ ಕ್ಷೇತ್ರ ಅದ್ಭುತವಾದ ಬೆಳವಣಿಗೆ ಕಾಣುತ್ತಿದ್ದು, ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಕ್ಕೆ ಈ ಬೆಳವಣಿಗೆ ಮುಖ್ಯವಾಗಿರಲಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
"ವಿಮಾನಯಾನ ಕ್ಷೇತ್ರ ಬೆಳವಣಿಗೆಯಾದರೆ ದೇಶದ ಪ್ರವಾಸೋದ್ಯಮ ಕ್ಷೇತ್ರವೂ ಬೆಳವಣಿಗೆಯಾಗಲಿದ್ದು, ಉದ್ಯೋಗಾವಕಾಶಗಳೂ ಹೆಚುತ್ತವೆ. ವಿಮಾನಗಳ ಸಂಖ್ಯೆಯನ್ನು ಭಾರತ ಸರ್ಕಾರವೂ ಹೆಚ್ಚಿಸಿದೆ. ಖಾಸಗಿ, ಸರ್ಕಾರಿ ಸ್ವಾಮ್ಯದ ಒಟ್ಟು 450 ವಿಮಾನಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಒಂದು ವರ್ಷದಲ್ಲೇ 900 ಹೊಸ ವಿಮಾನಗಳಿಗಾಗಿ ಬೇಡಿಕೆ ಬಂದಿದೆ ಎಂದು ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


