ಗಡಿಯಲ್ಲಿ ಮತ್ತೆ ಪಾಕ್ ಪುಂಡಾಟ: ಮತ್ತೊಂದು ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿರುವ ಗಡಿ ಭಾಗದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಮತ್ತೊಂದು ಒಳನುಸುಳುವಿಕೆಯ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

Published On :
ಜಮ್ಮು: ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿರುವ ಗಡಿ ಭಾಗದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಮತ್ತೊಂದು ಒಳನುಸುಳುವಿಕೆಯ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ರಕ್ಷಣಾ ಇಲಾಖೆ ವಕ್ತಾರರು ಈ ಬಗ್ಗೆ ಮಾಹಿತಿ ನೀಡಿದ್ದು, ಸಂಜೆ 5:15 ರ ವೇಳೆಗೆ ಪಾಕಿಸ್ತಾನದ ಸೇನೆ ಎಲ್ಒಸಿಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆಗೆ ಸಹಕಾರಿಯಾಗುವಂತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿತು. ಗಡಿಯಲ್ಲಿ ಎಚ್ಚರವಾಗಿದ್ದ ಭಾರತೀಯ ಸೇನೆ ತಕ್ಷಣವೇ ಆಟೋಮೆಟಿಕ್ ಫೈರ್ ನಿಂದ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ನಿಗ್ರಹಿಸಿದ್ದು, ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಖಾರಿ ಕರ್ಮಾರ ಸೆಕ್ಟರ್ ನಲ್ಲಿಯೂ ಪಾಕ್ ಸೇನೆ 15 ನಿಮಿಷಗಳ ಕಾಲ ಸಣ್ಣ ಹಾಗೂ ಬೃಹತ್ ಶಸ್ತ್ರಾಸ್ತ್ರಗಳ ನೆರವಿನಿಂದ ಗುಂಡಿನ ದಾಳಿ ನಡೆಸಿತ್ತು ಪಾಕಿಸ್ತಾನ ನಡೆಸಿರುವ ದಾಳಿಯಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು-ಕಾಶ್ಮೀರjammu-kashmirಭಾರತೀಯ ಸೇನೆInfiltration bidಒಳನುಸುಳುವಿಕೆPakistan terroristsಪಾಕಿಸ್ತಾನ ಭಯೋತ್ಪಾದಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


