ಬಾಗ್ಡೋಗ್ರ ವಿಮಾನ ನಿಲ್ದಾಣದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮಾರಾಟ ಯಂತ್ರ
ಡಾರ್ಜೀಲಿಂಗ್ ಜಿಲ್ಲೆಯ ಬಾಗ್ಡೋಗ್ರ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ಸ್ಯಾನಿಟರಿ ನ್ಯಾಪ್ಕಿನ್ ಮಾರಾಟ ಯಂತ್ರ ಅಳವಡಿಸಲಾಗುವುದು...

Published On :
ಡಾರ್ಜೀಲಿಂಗ್: ಡಾರ್ಜೀಲಿಂಗ್ ಜಿಲ್ಲೆಯ ಬಾಗ್ಡೋಗ್ರ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ಸ್ಯಾನಿಟರಿ ನ್ಯಾಪ್ಕಿನ್ ಮಾರಾಟ ಯಂತ್ರ ಅಳವಡಿಸಲಾಗುವುದು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಈ ತಿಂಗಳ ಅಂತ್ಯಕ್ಕೆ ವಿಮಾನ ನಿಲ್ದಾಣದ ಮಹಿಳೆಯರ ಶೌಚಾಲಯ ಬಳಿ ಸ್ಯಾನಿಟರಿ ನ್ಯಾಪ್ಕಿನ್ ಮಾರಾಟ ಯಂತ್ರ ಅಳವಡಿಸಲಾಗುತ್ತಿದ್ದು, ಪ್ರತಿ ನ್ಯಾಪ್ಕಿನ್ ಗೆ 5 ರುಪಾಯಿ ಬೆಲೆ ನಿಗದಿ ಮಾಡಲಾಗಿದೆ ಎಂದು ಬಾಗ್ಡೋಗ್ರ ವಿಮಾನ ನಿಲ್ದಾಣದ ನಿರ್ದೇಶಕ ರಾಕೇಶ್ ಆರ್ ಸಹಯ್ ಅವರು ಹೇಳಿದ್ದಾರೆ.
ಕೈಗೆಟುಕುವ ದರದಲ್ಲಿ ವಿಮಾನ ನಿಲ್ದಾಣಗಳಲ್ಲಿ ಸ್ಯಾನಿಟರಿ ಪ್ಯಾಡ್ ಗಳನ್ನು ಒದಗಿಸುವುದರಿಂದ ನೈರ್ಮಲ್ಯ ಕ್ರಮವನ್ನು ಉತ್ತೇಜಿಸಿದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಂಧೋರ್ ವಿಮಾನ ನಿಲ್ದಾಣದಲ್ಲಿ ಮೊಟ್ಟಮೊದಲ ಬಾರಿ ಇಂಥ ಯಂತ್ರ ಅಳವಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sanitary napkinಸ್ಯಾನಿಟರಿ ನ್ಯಾಪ್ಕಿನ್Bagdogra airportvending machinesಬಾಗ್ಡೋಗ್ರ ವಿಮಾನ ನಿಲ್ದಾಣಮಾರಾಟ ಯಂತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


