ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯವಾಗಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ಆಸ್ಪತ್ರೆ
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Published On :
ಮುಂಬೈ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕಳೆದ ಗುರುವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಆಗಮಿಸಿದ್ದರು. ಇದನ್ನೇ ಕೇಂದ್ರವಾಗಿರಿಸಿಕೊಂಡು ಕೆಲ ಮಾಧ್ಯಮಗಳು ಪರಿಕ್ಕರ್ ಅವರುನಾಲ್ಕನೇ ಹಂತದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದ್ದವು. ಇದೀಗ ಈ ಎಲ್ಲ ಊಹೋಪೋಹಗಳಿಗೆ ಮುಂಬೈನ ಲೀಲಾವತಿ ಆಸ್ಪತ್ರೆ ಆಡಳಿತ ಮಂಡಳಿ ತೆರೆ ಎಳೆದಿದ್ದು, ಪರಿಕ್ಕರ್ ಆರೋಗ್ಯವಾಗಿದ್ದು, ಸಾಮಾನ್ಯ ಚೆಕ್ ಅಪ್ ಗಾಗಿ ಆಸ್ಪತ್ರೆ ಆಗಮಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ಚಿಕಿತ್ಸೆ ಉತ್ತಮವಾದಿ ಸ್ಪಂದಿಸುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಇನ್ನು ಮುಂಬೈಗೆ ಆಗಮಿಸುವುದಕ್ಕೂ ಮುನ್ನ ಪರಿಕ್ಕರ್ ಅವರು ಹೊಟ್ಟೆನೋವಿನಿಂದ ಬಳಲಿ ಗೋವಾದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಆಸ್ಪತ್ರೆಯಲ್ಲಿ ಗೋವಾ ಸಿಎಂರನ್ನು ಭೇಟಿಯಾದ ಪ್ರಧಾನಿ ಮೋದಿ
ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪಾರಿಕ್ಕರ್ ರನ್ನು ಪ್ರಧಾನಿ ನರೇಂದ್ರ ಮೋದಿ ರವಿವಾರ ಭೇಟಿಯಾದರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪಾರಿಕ್ಕರ್ ರನ್ನು ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರ ಸಲಹೆಯಂತೆ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈGoaಗೋವಾPancreatic Cancerಪ್ಯಾಂಕ್ರಿಯಾಟಿಕ್ ಕ್ಯಾನ್ಸರ್Lilavati hospitalಲೀಲಾವತಿ ಆಸ್ಪತ್ರೆಸಿಎಂ ಮನೋಹರ್ ಪರಿಕ್ಕರ್CM Manohar Parrikar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


