ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಹೆಚ್ಚು ಸ್ಥಾನ, ಕಾಂಗ್ರೆಸ್ ಚೇತರಿಕೆ
ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕಳೆದ ವಾರ ಗುಜರಾತ್ ಸ್ಥಳೀಯ ಸಂಸ್ಥೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ...

Published On :
ಗಾಂಧಿನಗರ (ಗುಜರಾತ್): ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕಳೆದ ವಾರ ಗುಜರಾತ್ ಸ್ಥಳೀಯ ಸಂಸ್ಥೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಹೊರ ಬಿದ್ದಿದ್ದು, ರಾಜ್ಯದ 22 ಜಿಲ್ಲೆಗಳ 75 ನಗರ ಪಾಲಿಕೆಗಳ ಪೈಕಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸಹ ಹೀನಾಯವಾಗಿ ಸೋಲದೇ ತನ್ನ ಸ್ಥಾನಗಳನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.
2013ರಲ್ಲಿ ಒಟ್ಟು 59 ಪುರಸಭೆಗಳಲ್ಲಿ ಅಧಿಕಾರ ಹಿಡಿದಿದ್ದ ಬಿಜೆಪಿ, ಈ ಬಾರಿ ಕೇವಲ 44ಕ್ಕೆ ತೃಪ್ತಿಪಟ್ಟುಕೊಂಡಿದೆ. ಇನ್ನು ಆರು ಪುರಸಭೆಯಲ್ಲಿ ಅಧಿಕಾರದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿ 22 ನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿದಿದೆ.
ಗುಜರಾತಿನ ಒಟ್ಟು 75 ನಗರ ಪಂಚಾಯತ್, ಎರಡು ಜಿಲ್ಲಾ ಪಂಚಾಯತ್, 17 ತಾಲೂಕು ಪಂಚಾಯತ್ ಹಾಗೂ 1400 ಗ್ರಾಮ ಪಂಚಾಯತ್ ಗಳಿಗೂ ಚುನಾವಣೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


