ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ: ಎನ್ ಡಿ ಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ; ಜಗನ್ ರೆಡ್ಡಿ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕುರಿತ ಸಂಬಂಧ, ಒಂದು ವೇಳೆ ಟಿಡಿಪಿ ಬೆಂಬಲ ನೀಡಿದರೇ ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ...

Published On :
ಪ್ರಕಾಸಂ( ಆಂಧ್ರ ಪ್ರದೇಶ): ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕುರಿತ ಸಂಬಂಧ, ಒಂದು ವೇಳೆ ಟಿಡಿಪಿ ಬೆಂಬಲ ನೀಡಿದರೇ ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ವೈಎಸ್ ಆರ್ ಕಾಂಗ್ರೆಸ್ ಮುಖಂಡ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಪ್ರಜಾ ಸಂಕಲ್ಪ ಪಾದಯಾತ್ರೆಯ ಅಂಗವಾಗಿ ಪ್ರಕಾಸಂ ಜಿಲ್ಲೆಯ ಕಂಡಕುರುವಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಜಗನ್ ಮೋಹನ್ ರೆಡ್ಡಿ, ಆಂಧ್ರ ಪ್ರದೇಶದ ಹಿತದೃಷ್ಟಿಯಿಂದ ಎನ್ ಡಿ ಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಟಿಡಿಪಿಗೆ ತಮ್ಮ ಪಕ್ಷ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಕೇವಲ ಟಿಡಿಪಿ ಒಂದಕ್ಕೆ ಇದನ್ನು ಮಾಡಲು ಸಾಧ್ಯವಿಲ್ಲ ಎಂದಿರುವ ಜಗನ್ ಪವನ್ ಕಲ್ಯಾಣ್ ಅವರ ಜನಸೇನಾ ಪಾರ್ಟಿ ಕೂಡ ಬೆಂಬಲ ಸೂಚಿಸಬೇಕು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ರಾಜ್ಯದ ಟಿಡಿಪಿ ಮತ್ತು ಬಿಜೆಪಿ ಸಂಸದರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆಂಧ್ರ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಹೆಸರಲ್ಲಿ ರಾಜ್ಯಕ್ಕೆ ದ್ರೋಹ ಮಾಡಬೇಡಿಎಂದು ಆಗ್ರಹಿಸಿರುವ ಅವರು, ರಾಜ್ಯದ 25 ಸಂಸದರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎನ್ ಡಿ ಎ ಸರ್ಕಾರಅವಿಶ್ವಾಸ ನಿರ್ಣಯವಿಶೇಷ ಸ್ಥಾನಮಾನSpecial StatusJagan Mohan Reddyಜಗನ್ ಮೋಹನ್ ರೆಡ್ಡಿNDA Governmnentno confidence\' motion
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


