ದೇಶ

ತಮಿಳುನಾಡು ರಾಜ್ಯಪ್ರವಾಸ ಹಿನ್ನೆಲೆ : ಮಾಜಿ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಕಮಲ್ ಹಾಸನ್

ನಟ ಕಮಲಹಾಸನ್ ಅವರ ರಾಜಕೀಯ ಪಕ್ಷ ನಾಳೆ ಮದುರೈನಲ್ಲಿ ಅಸ್ತಿತ್ವಕ್ಕೆ ಬರಲಿದೆ. ನಂತರ ಅವರು ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ತಮಿಳುನಾಡು ರಾಜ್ಯಪ್ರವಾಸ ಹಿನ್ನೆಲೆ : ಮಾಜಿ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಕಮಲ್ ಹಾಸನ್
ನಟ ಕಮಲ್ ಹಾಸನ್ ಅವರ (ಸಾಂದರ್ಭಿಕ ಚಿತ್ರ)
Published On :

ಚೆನ್ನೈ: ನಟ ಕಮಲಹಾಸನ್ ಅವರ ರಾಜಕೀಯ ಪಕ್ಷ ನಾಳೆ ಮದುರೈನಲ್ಲಿ ಅಸ್ತಿತ್ವಕ್ಕೆ ಬರಲಿದೆ. ನಂತರ ಅವರು ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮೂವರು ಮಾಜಿ ಚುನಾವಣಾಧಿಕಾರಿಗಳನ್ನು ಕಮಲ್ ಹಾಸನ್ ಭೇಟಿಯಾಗಿ ಮಾತುಕತೆ ನಡೆಸಿದರು. ಟಿ.ಎನ್. ಶೇಷನ್, ಎನ್. ಗೋಪಾಲಸ್ವಾಮಿ, ಹಾಗೂ ಟಿ.ಎಸ್. ಕೃಷ್ಣಮೂರ್ತಿ ಅವರೊಂದಿಗೆ ಹಲವು ವಿಷಯ ಕುರಿತಂತೆ ಕಮಲ್ ಹಾಸನ್ ಚರ್ಚೆ ನಡೆಸಿದ್ದಾರೆ.

ಪಕ್ಷದ ನೋಂದಣಿ, ಚಿಹ್ನೆ, ಪ್ರಣಾಳಿಕೆ, ಆದಾಯ ತೆರಿಗೆ ಪಾವತಿ, ಸೇರಿದಂತೆ ರಾಜಕೀಯ ವ್ಯಕ್ತಿಗಳು ಹೊಂದಿರಬೇಕಾದ ಪ್ರತಿಯೊಂದು ವಿಷಯದ ಬಗ್ಗೆಯೂ ಕಮಲ್ ಹಾಸನ್ ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಮಲ್ ಹಾಸನ್,  ಮಾಜಿ ಚುನಾವಣಾಧಿಕಾರಿಗಳಿಂದ ಪ್ರಜಾಪ್ರಭುತ್ವ ಸಂಸ್ಥೆಯ ಬಗ್ಗೆ ಆಳವಾಗಿ ಅರ್ಥಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.