ಭಾರತದ ಅಗ್ನಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ!
ಭಾರತದ ಯಶಸ್ವೀ ಕ್ಷಿಪಣಿ ಅಗ್ನಿ-2 ಮಧ್ಯಮ ದೂರಗಾಮಿ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

Published On :
ಭುವನೇಶ್ವರ: ಭಾರತದ ಯಶಸ್ವೀ ಕ್ಷಿಪಣಿ ಅಗ್ನಿ-2 ಮಧ್ಯಮ ದೂರಗಾಮಿ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಮಂಗಳವಾರ ಬೆಳಗ್ಗೆ ಒಡಿಶಾದ ಬಾಲಾಸೋರ್ ನ ಅಬ್ದುಲ್ ಕಲಾಂ ದ್ವೀಪದಿಂದ ಮೊಬೈಲ್ ಲಾಂಚರ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಪರೀಕ್ಷೆ ವೇಳೆ ಕ್ಷಿಪಣಿ ನಿಗದಿತ ಸಮಯದಲ್ಲಿ ನಿಖರ ಗುರಿ ತಲುಪುವ ಮೂಲಕ ಯಶಸ್ವಿಯಾಗಿದೆ. ಕ್ಷಿಪಣಿ ಸುಮಾರು 2000 ಕಿ.ಮೀ ವ್ಯಾಪ್ತಿಯ ಸಾಮರ್ಥ್ಯ ಹೊಂದಿದ್ದು, ಅಗ್ನಿ-2 ಕ್ಷಿಪಣಿಯನ್ನು ಈಗಾಗಲೇ ಸೇನಾಪಡೆಯಲ್ಲಿ ಬಳಕೆ ಮಾಡಲಾಗುತ್ತಿದೆ.
ನೆಲದಿಂದ ನೆಲಕ್ಕೆ 2000 ಕಿ.ಮೀ. ದೂರದವರೆಗೂ ಚಿಮ್ಮಬಲ್ಲ ಈ ಕ್ಷಿಪಣಿಯ ಪರೀಕ್ಷೆಯು ಒಡಿಶಾ ಕಡಲ ತೀರದ ವ್ಹೀಲರ್ ದ್ವೀಪದಲ್ಲಿ ನಡೆಯಿತು. ಇಲ್ಲಿನ ಸಮಗ್ರ ಪರೀಕ್ಷಾ ವಲಯದ (ಐಟಿಆರ್) 4ನೇ ಉಡಾವಣಾ ಸಂಕೀರ್ಣದಿಂದ ಬೆಳಿಗ್ಗೆ ಚಿಮ್ಮಿದ ಕ್ಷಿಪಣಿ ಯಶಸ್ವಿಯಾಗಿ ಗುರಿ ತಲುಪಿತು ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ನೆರವಿನೊಂದಿಗೆ ಸೇನಾಪಡೆಯ ಸ್ಟ್ರಾಟಜಿಕ್ ಫೋರ್ಸ್‌ಸ್ ಕಮಾಂಡ್ (ಎಸ್‌ಎಫ್‌ಸಿ) ಈ ಪರೀಕ್ಷೆ ನಡೆಸಿತು. ಸೇನಾ ಪಡೆಗಳ ತರಬೇತಿಯ ಅಂಗವಾಗಿ ಈ ಪರೀಕ್ಷೆ ಏರ್ಪಡಿಸಲಾಗಿತ್ತು ಎಂದು ಡಿಆರ್‌ಡಿಒ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.
ಈ ಕ್ಷಿಪಣಿಯು 20 ಮೀಟರ್ ಉದ್ದ ಹಾಗೂ 17 ಟನ್ ತೂಕ ಹೊಂದಿದೆ. ಗರಿಷ್ಠ 1000 ಕಿ.ಮೀ. ತೂಕವನ್ನು ಗುರಿಯತ್ತ ಕೊಂಡೊಯ್ಯುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


