ಕುಪ್ವಾರದಲ್ಲಿ ಉಗ್ರ ಅಡಗುದಾಣ ಧ್ವಂಸ ಮಾಡಿದ ಸೇನೆ, ಶಸ್ತ್ರಾಸ್ತ್ರ ವಶ
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿರುವಂತೆಯೇ ಮಂಗಳವಾರ ಕುಪ್ವಾರದಲ್ಲಿ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿರುವಂತೆಯೇ ಮಂಗಳವಾರ ಕುಪ್ವಾರದಲ್ಲಿ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿದೆ.
ಕುಪ್ವಾರದ ಲಷ್ತಿಯಾಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ಉಗ್ರರ ಅಡಗುದಾಣವನ್ನು ಸೈನಿಕರು ಧ್ವಂಸ ಮಾಡಿದ್ದು, ಈ ವೇಳೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಬರೊಬ್ಬರಿ 2 ಕೆಜಿಯಷ್ಟು ಸುಧಾರಿತ ಸ್ಫೋಟಕ, ಮೂರು ಯುಬಿಜಿಎಲ್ ಶೆಲ್ ಗಳು, 15 ಸುತ್ತು ಜೀವಂತ ಗುಂಡುಗಳಿದ್ದ ಪಿಸ್ತೂಲ್, 335 ಸುತ್ತು ಜೀವಂತ ಗುಂಡುಗಳ ಸಹಿತ ಎಕೆ 47 ಗನ್, 7 ಡಿಟೋನೇಟರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕುಪ್ವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಅವಿತಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಸಿಆರ್ ಪಿಎಫ್ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿ ಮೇರೆಗೆ 41 ರಾಷ್ಟ್ರೀಯ ರೈಫಲ್ಸ್ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Terror HideoutIndian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆಉಗ್ರರ ಅಡಗುದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


