ಸಿಎಂ ಪಟ್ನಾಯಕ್ ಮೇಲೆ ಶೂ ಎಸೆತ: ಕೆಲವರ ಪ್ರಚೋದನೆಯಿಂದ ಶೂ ಎಸೆದೆ; ಆರೋಪಿ ಹೇಳಿಕೆ
ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದ್ದ ಒಡಿಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಮೇಲೆ ಶೂ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ...

Published On :
ಒಡಿಸಾ: ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದ್ದ ಒಡಿಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಮೇಲೆ ಶೂ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶೂ ಎಸೆದ ಆರೋಪಿ ಕಾರ್ತಿಕ್ ಮೆಹರ್ ನನ್ನು ಪೊಲೀಸರು ಬಂಧಿಸಿದ್ದು, ಕೆಲವರ ಪ್ರಚೋದನೆಯಿಂದಾಗಿ ನಾನು ಶೂ ಎಸೆದೆ ಎಂದು ಹೇಳಿದ್ದಾನೆ,
ಶೂ ಎಸೆಯುವಂತೆ ಯಾರು ಪ್ರಚೋದನೆ ನೀಡಿದರು ಎಂಬ ಪ್ರಶ್ನೆಗೆ ಉತ್ತರಿಸಿದ ಕಾರ್ತಿಕ್ ಅವರ ಹೆಸರನ್ನು ಹೇಳಲು ನಿರಾಕರಿಸಿದ್ದಾನೆ, ಮೂರು ಮಂದಿ ನನ್ನನ್ನು ಪ್ರಚೋದಿಸಿದ್ದಾರೆ, ಅವರು ಬಿಜೆಪಿಯವರು ಇರಬಹುದು, ಬಿಜೆಡಿ ಪಕ್ಷದವರಿರಬಹುದು, ಕಾಂಗ್ರೆಸ್ ಅಥವಾ ಆಮ್ ಆದ್ಮಿ ಪಕ್ಷದವರೇ ಇರಬಹುದು, ನಾನು ಏಕೆ ಅವರ ಗುರುತನ್ನು ಹೇಳಲಿ ಎಂದು ಪ್ರಶ್ನಿಸಿದ್ದಾನೆ.
ನಾನು ಯಾವುದೇ ರಾಜಕೀಯ ಪಕ್ಷದ ಬೆಂಬಲಿಗನಲ್ಲ, ರಾಜಕೀಯ ನಾಯಕರು ಏಕೆ ಇಲ್ಲಿಗೆ ಬಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಬೇಕು. ಸಾರ್ವಜನಿಕರು ತಮಗೆ ಬೇಕಾದವರಿಗೆ ವೋಟು ನೀಡಿ ಆಯ್ಕೆ ಮಾಡಲಿದ್ದಾರೆ ಎಂದು ಹೇಳಿದ್ದಾನೆ. ಬಾರ್ಗಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಿದ್ದ ಪಟ್ನಾಯಕ್ ಮೇಲೆ ಶೂ ಎಸೆಯಲಾಗಿತ್ತು. ನಂತರ ಆರೋಪಿಯನ್ನು ನೆರೆದಿದ್ದ ಜನ ಥಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


