ಅಕ್ರಮ ಸಂಬಂಧದಿಂದ ಬೇಸತ್ತು ಗಂಡನ ಶಿಶ್ನವನ್ನೇ ಕತ್ತರಿಸಿದ ಪತ್ನಿ!
ಗಂಡನ ಅಕ್ರಮ ಸಂಬಂಧದಿಂದ ಬೇಸತ್ತ ಗೃಹಿಣಿಯೊಬ್ಬರು ಆತನ ಶಿಶ್ನವನ್ನು ಕತ್ತರಿಸಿ ಶೌಚಾಲಯದಲ್ಲಿ ವಿಲೇವಾರಿ ಮಾಡಿದ್ದಾರೆ...

Published On :
ಜಲಂದರ್: ಗಂಡನ ಅಕ್ರಮ ಸಂಬಂಧದಿಂದ ಬೇಸತ್ತ ಗೃಹಿಣಿಯೊಬ್ಬರು ಆತನ ಶಿಶ್ನವನ್ನು ಕತ್ತರಿಸಿ ಶೌಚಾಲಯದಲ್ಲಿ ವಿಲೇವಾರಿ ಮಾಡಿದ್ದಾರೆ.
ಜೋಗಿಂದರ್ ನಗರದ ನಿವಾಸಿ ಅಜಾದ್ ಸಿಂಗ್ ಮರ್ಮಾಂಗವನ್ನು ಪತ್ನಿ ಸುಖ್ವಂತ್ ಕೌರ್ ಚಾಕುವಿನಿಂ ಕತ್ತರಿಸಿ ಅದನ್ನು ಶೌಚಾಲಯದಲ್ಲಿ ವಿಲೇವಾರಿ ಮಾಡಿದ್ದಾರೆ ಎಂದು ಜಲಂದರ್ ಸಹಾಯಕ ಪೊಲೀಸ್ ಆಯುಕ್ತ ಸತೀಂದರ್ ಕುಮಾರ್ ಹೇಳಿದ್ದಾರೆ.
ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅಜಾದ್ ಸಿಂಗ್ ರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಪರಿಸ್ಥಿತಿ ಗಂಭೀರವಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದರು.
ಅಜಾದ್ ಸಿಂಗ್ ತಂದೆ ದೂರಿನನ್ವಯ ಮಹಿಳೆಯ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


