ದೇಶ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಇಡಿ ಸಮನ್ಸ್ ಗೆ ತಡೆ ಕೋರಿ ಸುಪ್ರೀಂಗೆ ಕಾರ್ತಿ ಚಿದಂಬರಂ ಮನವಿ

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿ...

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಇಡಿ ಸಮನ್ಸ್ ಗೆ ತಡೆ ಕೋರಿ ಸುಪ್ರೀಂಗೆ ಕಾರ್ತಿ ಚಿದಂಬರಂ ಮನವಿ
ಕಾರ್ತಿ ಚಿದಂಬರಂ
Published On :
ನವದೆಹಲಿ:  ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ಗೆ ತಡೆ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಗುರುವಾರ ಸುಪ್ರೀಂ ಕೋರ್ಟ್ ಮನವಿ ಸಲ್ಲಿಸಿದ್ದಾರೆ.
ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಫೆ.23ಕ್ಕೆ ನಿಗದಿ ಮಾಡಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರನ್ ಅವರನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿ ಹೈಕೋರ್ಟ್ ಇಡಿ ವಶಕ್ಕೆ ನೀಡಿದೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಸಹ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.