ನಾನು ಫಿಟ್ ಆಗಿದ್ದೇನೆ, ಎಂದಿನಂತೆ ಕೆಲಸಕ್ಕೆ ಹಾಜರ್: ಗೋವಾ ಸಿಎಂ ಪರಿಕ್ಕರ್
ನಾನು ಸಂಪೂರ್ಣ ಗುಣಮುಖವಾಗಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಎಂದಿನಂತೆ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸುವುದಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಅವರು ಗುರುವಾರ ಹೇಳಿದ್ದಾರೆ.

Published On :
ಪಣಜಿ: ನಾನು ಸಂಪೂರ್ಣ ಗುಣಮುಖವಾಗಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಎಂದಿನಂತೆ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸುವುದಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಅವರು ಗುರುವಾರ ಹೇಳಿದ್ದಾರೆ.
ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನೋಹರ್ ಪಾರಿಕ್ಕರ್ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ನಾನು ನಿಯಮಿತ ಕರ್ತವ್ಯಗಳನ್ನು ನಿರ್ವಹಿಸುತ್ತೇನೆ. ಆದರೆ ವೈದ್ಯರ ಸಲಹೆಯಂತೆ ಸಾರ್ವಜಿನಕ ಸಭೆಗಳಲ್ಲಿ ಭಾಗವಹಿಸುವುದನ್ನು ಕಡಿಮೆ ಮಾಡುತ್ತೇನೆ ಎಂದಿದ್ದಾರೆ.
ತಮ್ಮ ಚೇತರಿಕೆಗೆ ಹಾರೈಸಿದ, ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಗೋವಾ ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಫೆ. 15ರಂದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಮನೋಹರ್ ಪರ್ರೀಕರ್ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಬಜೆಟ್ ಅಧಿವೇಶನಕ್ಕೆ ತೆರಳಿ ಬಜೆಟ್ ಮಂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


