ವಾಟ್ಸ್ ಆಪ್ ಗ್ರೂಪ್ ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಹಂಚಿಕೆ: ಸಿಬಿಐ ನಿಂದ ಐವರ ಬಂಧನ
ವಾಟ್ಸ್ ಆಪ್ ಮೂಲಕ ಮಕ್ಕಳ ಅಶ್ಲೀಲ ಚಲನಚಿತ್ರಗಳನ್ನು ಹಂಚಿಕೆ ಮಾಡುತ್ತಿದ್ದ 5 ಜನರ ತಂಡವನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ನವದೆಹಲಿ: ವಾಟ್ಸ್ ಆಪ್ ಮೂಲಕ ಮಕ್ಕಳ ಅಶ್ಲೀಲ ಚಲನಚಿತ್ರಗಳನ್ನು ಹಂಚಿಕೆ ಮಾಡುತ್ತಿದ್ದ 5 ಜನರ ತಂಡವನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ದೇಶ ಹಾಗೂ ವಿದೇಶಗಳಿಂದ 119 ಸದಸ್ಯರಿದ್ದ ವಾಟ್ಸ್ ಆಪ್ ಗ್ರೂಪ್ ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಗುಪ್ತಚರ ಇಲಾಖೆ ಮಾಹಿತಿಯನ್ನಾಧರಿಸಿ ಸಿಬಿಐ ಪೊಲೀಸರು ಈ ದುಷ್ಕೃತ್ಯದಲ್ಲಿ ತೊಡಗಿದ್ದ ಸದಸ್ಯರನ್ನು ಬಂಧಿಸಿದ್ದಾರೆ.
ಕಿಡ್ಸ್ XXX ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಅಮೆರಿಕ, ಚೀನಾ, ಪಾಕಿಸ್ತಾನ, ಅಫ್ಘಾನಿಸ್ತಾನ, ಶ್ರೀಲಂಕಾ, ಬ್ರೆಜಿಲ್, ಕೀನ್ಯ, ನೈಜೀರಿಯಾ, ಮೆಕ್ಸಿಕೋ ನ್ಯೂಜಿಲ್ಯಾಂಡ್ ಹಾಗೂ ಭಾರತದ ವಾಟ್ಸ್ ಆಪ್ ಬಳಕೆದಾರರೂ ಇದ್ದರು.
ಗುಪ್ತಚರ ಇಲಾಖೆ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿರುವ ಸಿಬಿಐ ವಾಟ್ಸ್ ಆಪ್ ಗ್ರೂಪ್ ನ ಆಡ್ಮಿನ್ ಗಳಾದ ನಿಖಿಲ್ ವರ್ಮಾ(ಉತ್ತರ ಪ್ರದೇಶ), ಸತ್ಯೇಂದ್ರ ಓಂಪ್ರಕಾಶ್(ಮುಂಬೈ) ಚೌಹಾಣ್, ನಫೀಜ್ ರಾಜಾ(ನವದೆಹಲಿ), ಜಾಹಿದ್(ನವದೆಹಲಿ) ಹಾಗೂ ಆದರ್ಶ್(ಉತ್ತರ ಪ್ರದೇಶ) ಎಂಬುವವರನ್ನು ಬಂಧಿಸಿದ್ದು, 5 ಜನರ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67-ಬಿ ಅಡಿಯಲ್ಲಿ ಫೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


