ಸುನಂದಾ ಪುಷ್ಕರ್ ಪ್ರಕರಣ: ದೆಹಲಿ ಪೋಲೀಸರಿಗೆ ಸುಪ್ರೀಂ ಕೋರ್ಟ್ ನೋಟೀಸ್
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ.....

Published On :
ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೋಲೀಸರಿಗೆ ಸರ್ವೋಚ್ಚ ನ್ಯಾಯಾಲಯವು ಮನವಿ ಮಾಡಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ಅವರನ್ನೊಳಗೊಂಡ ಪೀಠವು ದೆಹಲಿ ಪೋಲೀಸರಿಗೆ ನೋಟೀಸ್ ನೀಡಿದೆ. "ಪೋಲೀಸರ ಕಾರ್ಯನಿರ್ವಹಣೆಯ ಪ್ರಶ್ನೆ ಮುಂದಿಟ್ಟು ನೋಟೀಸ್ ನೀಡಲಾಗಿದೆ" ಎಂದು ಪೀಠ ಅಭಿಪ್ರಾಯಪಟ್ಟಿದೆ.
ಪುಷ್ಕರ್ ಸಾವಿನ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಬೇಕೆಂದು ಸ್ವಾಮಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ನ್ಯಾಯಾಲಯವು ಅ. 26ರಂದು ತಳ್ಳಿ ಹಾಕಿತ್ತು. ನ್ಯಾಯಾಲಯದ ಈ ನಿಲುವನ್ನು ಪ್ರಶ್ನಿಸಿ ಸ್ವಾಮಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಜನವರಿ 17, 2014ರಲ್ಲಿ ದೆಹಲಿಯ ಪಂಚತಾರಾ ಹೋಟೆಲ್ ಒಂದರಲ್ಲಿ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢವಾಗಿ ಸಾವಿಗೀಡಾಗಿದ್ದರು. ಇವರ ಸಾವಿನ ತನಿಖೆ ನಡೆಸುವಂತೆ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಳೆದ ವರ್ಷ ದೆಹಲಿ ಹೈಕೋರ್ಟ್ ತಳ್ಳಿ ಹಾಕಿತ್ತು. ಸ್ವಾಮಿ ಅವರ ಅರ್ಜಿ ರಾಜಕೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Subramanian SwamyDelhi Policeದೆಹಲಿ ಪೊಲೀಸ್ಸುಬ್ರಮಣ್ಯನ್ ಸ್ವಾಮಿSunanda Pushkar caseಸುನಂದಾ ಪುಷ್ಕರ್ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


