ದೇಶ

ಹಾಡಹಗಲೇ ಮುಂಬೈ ರೈಲು ನಿಲ್ದಾಣದಲ್ಲಿ ಹುಡುಗಿಗೆ ಮುತ್ತು ಕೊಡಲು ಯತ್ನಿಸಿದ ದುಷ್ಕರ್ಮಿ, ಸಿಸಿಟಿವಿ ದೃಶ್ಯ ವೈರಲ್

ಹಾಡಹಗಲೇ ರೈಲು ನಿಲ್ದಾಣದಲ್ಲಿ ದುಷ್ಕರ್ಮಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮುಂಬೈನಲ್ಲಿ ನಡೆದಿದೆ.

ಹಾಡಹಗಲೇ ಮುಂಬೈ ರೈಲು ನಿಲ್ದಾಣದಲ್ಲಿ ಹುಡುಗಿಗೆ ಮುತ್ತು ಕೊಡಲು ಯತ್ನಿಸಿದ ದುಷ್ಕರ್ಮಿ, ಸಿಸಿಟಿವಿ ದೃಶ್ಯ ವೈರಲ್
ಸಿಸಿಟಿವಿ ದೃಶ್ಯಾವಳಿ
Published On :
ಮುಂಬೈ: ಹಾಡಹಗಲೇ ರೈಲು ನಿಲ್ದಾಣದಲ್ಲಿ ದುಷ್ಕರ್ಮಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮುಂಬೈನಲ್ಲಿ ನಡೆದಿದೆ.
ಮುಂಬೈನ ತುರ್ಬೆ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯೊಬ್ಬರಿಗೆ ಕಿರುಕುಳ ನೀಡಿರುವ ಘಟನೆ ಗುರುವಾರ ನಡೆದಿದೆ. ನಿಲ್ದಾಣದಲ್ಲಿ ಯುವತಿ ನಡೆದು ಹೋಗುತ್ತಿದ್ದಾಗ ಆಕೆಯನ್ನು ಹಿಂಬಾಲಿಸುತ್ತಿದ್ದ ಸುಮಾರು 43 ವರ್ಷದ  ವ್ಯಕ್ತಿ ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಚುಂಬಿಸಿದ್ದಾನೆ. ಈ ದೃಶಗಳು ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಪ್ರಸ್ತುತ ಆರೋಪಿಯುನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ನಿಲ್ದಾಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ವ್ಯಕ್ತಿ ಯುವತಿಯನ್ನು ತಬ್ಬಿಕೊಂಡು ಚುಂಬಿಸಿರುವ ದೃಶ್ಯಾವಳಿಗಳನ್ನು ಸಿಬ್ಬಂದಿ ಪರಿಶೀಲನೆ ಮಾಡಿದ್ದು, ಯುವತಿ ನೀಡಿದ ದೂರಿನವ  ಆಧಾರದ ಮೇಲೆ ರೈಲ್ವೇ ಪೊಲೀಸರು ಕಾರ್ಯಾಚರಣೆ ನಡೆಸಿ ಸಬ್ ವೇ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಂಧಿತ ಆರೋಪಿಯನ್ನು 43 ವರ್ಷದ ನರೇಶ್ ಜೋಷಿ ಎಂದು ತಿಳಿದು ಬಂದಿದ್ದು, ಇದೀಗ  ಆತನ ವಿರುದ್ಧ ಐಪಿಸಿ ಸೆಕ್ಷನ್ 354 (ಎ) (ಲೈಂಗಿಕ ಕಿರುಕಳ) ಪ್ರಕರಣದಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಇಂತಹುದೇ ಘಟನೆ ಕಳೆದ ಜನವರಿಯಲ್ಲೂ ಕೂಡ ಸಂಭವಿಸಿತ್ತು. ಮುಂಬೈನ ಕಾರ್ಟರ್ ರಸ್ತೆಯಲ್ಲಿ 23 ವರ್ಷದ ವ್ಯಕ್ತಿ ತನ್ನ ಮಾಜಿ ಗೆಳತಿಯನ್ನು ನಿಂದಿಸಿ, ಬಲವಂತವಾಗಿ ಚುಂಬಿಸಿದ ಆರೋಪದ ಮೇರೆಗೆ ಪೊಲೀಸರು ಆತನನ್ನು  ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.