ಸಾರ್ವಜನಿಕ ವಲಯ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ಅರುಣ್ ಜೈಟ್ಲಿ
ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಎಕನಾಮಿಕ್ ಟೈಮ್ಸ್ ಜಾಗತಿಕ ವ್ಯವಹಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣದ ನಂತರ ಬ್ಯಾಂಕುಗಳ ಖಾಸಗೀಕರಣದ ಬಗ್ಗೆ ಹಲವು ಜನ ಮಾತನಾಡುತ್ತಿದ್ದಾರೆ. ಆದರೆ, ಖಾಸಗೀಕರಣಕ್ಕೆ ರಾಜಕೀಯ ಪಕ್ಷಗಳ ಒಪ್ಪಿಗೆ ಬೇಕಾಗುತ್ತದಲ್ಲದೇ, ಬ್ಯಾಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ
ತರಬೇಕಾಗುತ್ತದೆ ಇದೊಂದು ಸವಾಲಿನ ಕೆಲಸ ಎಂದರು.
ಬ್ಯಾಂಕುಗಳ ಖಾಸಗೀಕರಣ ಸಂಬಂಧ ನಿನ್ನೆ ಅರುಣ್ ಜೇಟ್ಲಿ ಅವರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದು, 2-3 ಪ್ರಮುಖ ಬ್ಯಾಂಕುಗಳನ್ನು ಹೊರತುಪಡಿಸಿ, ಉಳಿದ ಬ್ಯಾಂಕುಗಳನ್ನು ಹಂತಹಂತವಾಗಿ ಖಾಸಗೀಕರಣಗೊಳಿಸುವಂತೆ ಪ್ರಸ್ತಾವ ಮಾಡಲಾಗಿದೆ ಎಂದು ಎಫ್ ಐಸಿಸಿಐ ಅಧ್ಯಕ್ಷ ರಾಶೇಶ್ ಶಾ ಹೇಳಿದ್ದರು.
ಸಾರ್ವಜನಿಕ ಬ್ಯಾಂಕುಗಳಲ್ಲಿನ ಪಾಲನ್ನು ಶೇಕಡ 50 ರಷ್ಟು ಇಳಿಸುವಂತೆ ಅಶೋಚಾಮ್ ಸರ್ಕಾರವನ್ನು ಒತ್ತಾಯಿಸಿತ್ತು. ಬ್ಯಾಂಕುಗಳ ಖಾಸಗೀಕರಣಕ್ಕೆ ಹಲವು ಉದ್ಯಮ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


