ದೇಶ

ಸಾರ್ವಜನಿಕ ಹಣ ಲೂಟಿ ಮಾಡಲು ಬಿಡುವುದಿಲ್ಲ: ಪಿಎನ್ ಬಿ ವಂಚನೆ ಪ್ರಕರಣದ ಬಗ್ಗೆ ಮೌನ ಮುರಿದ ಪ್ರಧಾನಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದಿದ್ದು, ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಹಣ ಲೂಟಿ ಮಾಡಲು ಬಿಡುವುದಿಲ್ಲ: ಪಿಎನ್ ಬಿ ವಂಚನೆ ಪ್ರಕರಣದ ಬಗ್ಗೆ ಮೌನ ಮುರಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ
Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದಿದ್ದು, ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. 
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ಆರ್ಥಿಕ ಅಪರಾಧಗಳ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ವ್ಯವಸ್ಥೆ ಸಾರ್ವಜನಿಕರ ಹಣವನ್ನು ಲೂಟಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ನೀತಿ ಹಾಗೂ ನಿಯಮಗಳನ್ನು ರೂಪಿಸುವವರು ತಮ್ಮ ಕೆಲಸಗಳನ್ನು ಶ್ರದ್ಧೆಯಿಂದ ಮಾಡಬೇಕು ಎಂದು ಇದೇ ವೇಳೆ ಪ್ರಧಾನಿ ಮೋದಿ ಕರೆ ನೀಡಿದ್ದು, ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳು ಇದನ್ನು ಮತ್ತಷ್ಟು ವಿಶೇಷವಾಗಿ ಪಾಲಿಸಬೇಕೆಂದು ಮೋದಿ ಹೇಳಿದ್ದಾರೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ನೀರವ್ ಮೋದಿ 11 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.