ಪತ್ನಿಯ ಅನೈತಿಕ ಸಂಬಂಧ: ಪತ್ನಿ, ಮಕ್ಕಳಿಬ್ಬರ ಕತ್ತು ಸೀಳಿ, ಆತ್ಮಹತ್ಯೆಗೆ ಶರಣಾದ ಪತಿ
ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು 40 ವರ್ಷದ ವ್ಯಕ್ತಿಯೋರ್ವ ಪತ್ನಿ ಹಾಗೂ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ನಂತರ ತಾನು ನೇಣು ಬಿಗಿದುಕೊಂಡು...

Published On :
ಸೋನಿಪತ್: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು 40 ವರ್ಷದ ವ್ಯಕ್ತಿಯೋರ್ವ ಪತ್ನಿ ಹಾಗೂ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.
ಘಟನಾ ಸ್ಥಳದಲ್ಲಿ ಸೂಸೈಡ್ ನೋಟ್ ಸಿಕ್ಕಿದ್ದು ಅದರಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಬರೆಯಲಾಗಿದೆ. ಮೃತರನ್ನು 40 ವರ್ಷ ಸತೀಶ್ ಪತ್ನಿ 38 ವರ್ಷದ ಜ್ಯೋತಿ, ಮಕ್ಕಳಾದ 14 ವರ್ಷದ ಅಕ್ಷಯ್ ಮತ್ತು 12 ವರ್ಷದ ಆರ್ಯನ್ ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗ್ಗೆ ಈ ಘಟನೆ ನಡೆಸಿದ್ದು ಹೆಚ್ಚುವರಿ ತರಗತಿಗಾಗಿ ಶನಿವಾರ ಹುಡುಗರ ಹೊರಹೋಗದ್ದನ್ನು ಕಂಡ ನೆರೆಮನೆಯವರು ಸತೀಶ್ ಸಹೋದರನಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಪೊಲೀಸರಿಗೆ ಮಾಹಿತಿ ಸಿಕ್ಕಿದ್ದರಿಂದ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸಹೋದರ ಪ್ರವೀಣ್ ಸಹಾಯದೊಂದಿಗೆ ಮನೆಯ ಬಾಗಿಲನ್ನು ಹೊಡೆದು ಒಳನುಗ್ಗಿದಾಗ ಘಟನೆ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


