ಬಸವಣ್ಣನವರ ವಚನವನ್ನು ಅಸ್ಪಷ್ಟವಾಗಿ ಉಚ್ಛರಿಸಿದ ರಾಹುಲ್ ಗಾಂಧಿ; ವಿಡಿಯೋ ವೈರಲ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಜನಾಶೀರ್ವಾದ ಪ್ರಚಾರ ರ್ಯಾಲಿಯಲ್ಲಿ ತೊಡಗಿದ್ದಾರೆ...

Published On :
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಜನಾಶೀರ್ವಾದ ಪ್ರಚಾರ ರ್ಯಾಲಿಯಲ್ಲಿ ತೊಡಗಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಜನಶೀರ್ವಾದದ ರ್ಯಾಲಿಯಲ್ಲಿ ಮಾತನಾಡುವ ವೇಳೆ ಕಾಯಕಯೋಗಿ, ಜಗಜ್ಯೋತಿ ಬಸವಣ್ಣನವರ ಕುರಿತು ಮಾತನಾಡಿದರು. ಬಸವಣ್ಣನವರ ವಚನವೊಂದನ್ನು ಅಸ್ಪಷ್ಟವಾಗಿ ಉಚ್ಛರಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇವನ್ಯಾರವ ಇವನ್ಯಾರವ ಎಂದೆನಿಸದಿರಯ್ಯಾ, ಇವ ನಮ್ಮವ ಇವ ನಮ್ಮವ ಎಂದೆನಿಸಿರಯ್ಯಾ, ವಚನವನ್ನು ರಾಹುಲ್ ಗಾಂಧಿ (ಇವ್ ನರ್ವ, ಇವ್ ನರ್ವ.. ಇಬ್ ನಮ್ಬವ, ಇಬ್ ನಮ್ಬವ) ಅಸ್ಪಷ್ಟವಾಗಿ ಉಚ್ಛರಿಸಿದ್ದು ಇದೀಗ ನಗೆಪಾಟಲಿಗೀಡಾಗಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಸಾಮಾಜಿಕ ಜಾಲತಾಣKarnatakaಕರ್ನಾಟಕRahul Gandhiರಾಹುಲ್ ಗಾಂಧಿSocial Mediaಜನಾಶೀರ್ವಾದ ಯಾತ್ರೆJanashirwad Yatra
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


