ಉಗ್ರರ ಆರ್ಥಿಕತೆಗೆ ಕಡಿವಾಣ: ಪಾಕ್ ಪರ ನಿಂತು ಮುಖಭಂಗ ಎದುರಿಸಲು ಚೀನಾ ಸಿದ್ಧವಿರಲಿಲ್ಲ-ವರದಿ
ಭಯೋತ್ಪಾದಕರಿಗೆ ಆರ್ಥಿಕ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಫ್ಎಟಿಎಫ್ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ರಾಷ್ಟ್ರಗಳ ಪಟ್ಟಿಗೆ

Published On :
ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಫ್ಎಟಿಎಫ್ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ರಾಷ್ಟ್ರಗಳ ಪಟ್ಟಿಗೆ ಸೇರಿಸಿದ್ದಕ್ಕೆ ಕೊನೆ ಕ್ಷಣದಲ್ಲಿ ಟರ್ಕಿ ಹೊರತುಪಡಿಸಿ ಚೀನಾ ಸೇರಿದಂತೆ ಉಳಿದೆಲ್ಲಾ ದೇಶಗಳೂ ಬೆಂಬಲ ವ್ಯಕ್ತಪಡಿಸಿದ್ದವು.
ಅಮೆರಿಕ ಪ್ರಸ್ತಾವನೆಗೆ ಪ್ರಾರಂಭದಲ್ಲಿ ಚೀನಾ, ಟರ್ಕಿ, ಸೌದಿ, ಗಲ್ಫ್ ದೇಶಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೆ ಕೊನೆ ಕ್ಷಣದಲ್ಲಿ ತನ್ನ ಪರಮಾಪ್ತ ರಾಷ್ಟ್ರ ಪಾಕಿಸ್ತಾನಕ್ಕೆ ಚೀನಾ ಕೈಕೊಟ್ಟಿತ್ತು. ಚೀನಾ ಪಾಕಿಸ್ತಾನವನ್ನು ಬೆಂಬಲಿಸದೇ ಇರುವುದರ ಹಿಂದಿನ ಕಾರಣ ಈಗ ಬಹಿರಂಗಗೊಂಡಿದ್ದು, ಪಾಕಿಸ್ತಾನವನ್ನು ಬೆಂಬಲಿಸುವ ಮೂಲಕ ಚೀನಾ ಮುಖಭಂಗ ಎದುರಿಸಲು ಸಿದ್ಧವಿರಲಿಲ್ಲ ಎಂಬ ಅಂಶವನ್ನು ಪಾಕಿಸ್ತಾನದ ಪತ್ರಿಕೆಯೇ ವಿಶ್ಲೇಷಿಸಿದೆ.
ಪ್ರಾರಂಭದಲ್ಲಿ ಪಾಕಿಸ್ತಾನ ಚೀನಾದ ಬೆಂಬಲ ಸಿಗುತ್ತದೆ ಎಂಬ ಭರವಸೆ ಹೊಂದಿತ್ತು. ಅಮೆರಿಕಾಗೆ ವಿರುದ್ಧ ನಿಲ್ಲಲು ಚೀನಾದ ಬೆಂಬಲ ಅತ್ಯಂತ ಸಹಕಾರಿಯಾಗಿತ್ತು, ಚೀನಾ ಬೆಂಬಲದ ವಿಶ್ವಾಸದಿಂದಲೇ ಪಾಕ್ ವಿದೇಶಾಂಗ ಸಚಿವರೂ ಸಹ ಟ್ವೀಟ್ ಮೂಲಕ ಮಿತ್ರ ರಾಷ್ಟ್ರಗಳಿಗೆ ಧನ್ಯವಾದ ತಿಳಿಸಿದ್ದರು. ಆದರೆ ನಿರ್ಣಾಯಕ ಘಟ್ಟದಲ್ಲಿ ಚೀನಾ ಪಾಕ್ ಗೆ ಕೈಕೊಟ್ಟಿದ್ದು, ಭಯೋತ್ಪಾದಕರಿಗೆ ಆರ್ಥಿಕ ನೆರವು ಕಲ್ಪಿಸುತ್ತಿರುವ ರಾಷ್ಟ್ರಗಳ ಪಟ್ಟಿಗೆ ಪಾಕ್ ಸೇರ್ಪಡೆಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


