ದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಸಿಸಿಟಿವಿ ವಿರೂಪಗೊಳಿಸಲಾಗಿದೆ-ಪೊಲೀಸ್
ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿವನ್ನು ವಿರೂಪಗೊಳಿಸಲಾಗಿದೆ. ವಿಧಿ ವಿಜ್ಞಾನ ಪ್ರಾಯೋಗಾಲಯದಿಂದ ಅದನ್ನು ಶೀಘ್ರದಲ್ಲಿಯೇ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿವನ್ನು ವಿರೂಪಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಸಭೆ ನಡೆದಿತ್ತು. ಸಿಸಿಟಿವಿಯಲ್ಲಿ ವೇಳೆ ಬದಲಾಗಿದ್ದು, ಅದನ್ನು ವಿರೂಪಗೊಳಿಸಲಾಗಿದೆ ವಿಧಿ ವಿಜ್ಞಾನ ಪ್ರಾಯೋಗಾಲಯದಿಂದ ಅದನ್ನು ಶೀಘ್ರದಲ್ಲಿಯೇ ಪರಿಶೀಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹರೇಂದ್ರ ಸಿಂಗ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ದೆಹಲಿ ಲೆಪ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲೊನ್ ಮೊನ್ನೆ ದಿನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಫೆ. 20 ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಅಮಾನತುಲ್ಲಾಖಾನ್ ಹಾಗೂ ಪ್ರಕಾಶ್ ಜಾರ್ವಾಲ್ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದರು
ಭಾರತೀಯ ಆಡಳಿತ ಸೇವಾ ವಿಭಾಗದ ಕಾರ್ಯದರ್ಶಿ ಮನೀಶಾ ಸಕ್ಸೇನಾ , ಗೃಹ ಖಾತೆ ರಾಜ್ಯಸಚಿವರೊಂದಿಗೆ ಮಾತುಕತೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದ್ದರು.
ಪ್ರಸ್ತುತ ಎಎಪಿಯ ಇಬ್ಬರು ಶಾಸಕರನ್ನು 16 ದಿನಗಳ ಕಾಲ ನ್ಯಾಯಾಂಗ
ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


