ಶ್ರೀದೇವಿಗೆ ಹೃದಯ ಸಂಬಂಧಿ ಸಮಸ್ಯೆಗಳೇ ಇರಲಿಲ್ಲ: ಕುಟುಂಬ ಸದಸ್ಯರು
ನಟಿ ಶ್ರೀದೇವಿಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳಿರಲ್ಲಿಲ್ಲ ಎಂದು ಶ್ರೀದೇವಿ ಕುಟುಂಬ ಸದಸ್ಯರು ಹೇಳಿದ್ದಾರೆ.

Published On :
ನವದೆಹಲಿ: ನಟಿ ಶ್ರೀದೇವಿಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳಿರಲ್ಲಿಲ್ಲ ಎಂದು ಶ್ರೀದೇವಿ ಕುಟುಂಬ ಸದಸ್ಯರು ಹೇಳಿದ್ದಾರೆ.
ನಿನ್ನೆ ದುಬೈನಲ್ಲಿಸಂಬಂಧಿಯೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ನಟಿ ಶ್ರೀದೇವಿ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುಟುಂಬ ಸದಸ್ಯರು ಶ್ರೀದೇವಿಗೆ ಯಾವುದೇ ರೀತಿಯ ಹೃದಯಸಂಬಂಧಿ ಸಮಸ್ಯೆಗಳಿರಲಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಶ್ರೀದೇವಿ ಅವರ ಭಾವ ಮತ್ತು ನಟ ಸಂಜಯ್ ಕಪೂರ್, ನಿಜಕ್ಕೂ ಈ ವಿಚಾರ ನಮಗೆ ಆಘಾತವನ್ನುಂಟು ಮಾಡಿದೆ. ಶ್ರೀದೇವಿ ಅವರಿಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳೇ ಇರಲಿಲ್ಲ. ಒಂದೇ ಒಂದು ದಿನವೂ ಎದೆ ನೋವು ಎಂದು ಹೇಳಿದವರಲ್ಲ. ಹೀಗಿದ್ದೂ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬುದನ್ನು ನಂಬಲ ಸಾಧ್ಯವಾಗುತ್ತಿಲ್ಲ ಎಂದು ಭಾವುಕರಾದರು.
ಇನ್ನು ಪ್ರಸ್ತುತ ಶ್ರೀದೇವಿ ಅವರ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಭಾರತಕ್ಕೆ ಅವರ ಮೃತದೇಹವನ್ನು ರವಾನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


