ಶ್ರೀದೇವಿ ನಿಧನ: ರಾಜಕೀಯದ ಹೊರತಾಗಿ ಯೋಚನೆ ಮಾಡಿ, ಕಾಂಗ್ರೆಸ್ ಗೆ ಟ್ವೀಟಿಗರ ತಪರಾಕಿ!
ಬಾಲಿವುಡ್ ಮೆಗಾ ಹಿರೋಯಿನ್ ನಟಿ ಶ್ರೀದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಕಾಂಗ್ರೆಸ್ ಅವರ ಅಭಿಮಾನಿಗಳಿಂದ ತಪರಾಕಿಗೆ ಗುರಿಯಾದ ಪ್ರಸಂಗ ನಡೆದಿದೆ.

Published On :
ನವದೆಹಲಿ: ಬಾಲಿವುಡ್ ಮೆಗಾ ಹಿರೋಯಿನ್ ನಟಿ ಶ್ರೀದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಕಾಂಗ್ರೆಸ್ ಅವರ ಅಭಿಮಾನಿಗಳಿಂದ ತಪರಾಕಿಗೆ ಗುರಿಯಾದ ಪ್ರಸಂಗ ನಡೆದಿದೆ.
ನಟಿ ಶ್ರೀದೇವಿ ನಿಧನಕ್ಕೆ ಸಂತಾಪ ಸೂಚಿಸಿದ್ದ ಕಾಂಗ್ರೆಸ್ ಪಕ್ಷ, ದಿವಂಗತ ನಟಿಯನ್ನು ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು ಎಂದು ಟ್ವೀಟ್ ಮಾಡಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಪಕ್ಷದ ಈ ಟ್ವೀಟ್ ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಸಾವಿನಲ್ಲೂ ರಾಜಕೀಯ ಲಾಭ ಪಡೆಯುವ ಪ್ರಯತ್ನ ಬೇಡ.. ರಾಜಕೀಯದ ಹೊರತಾಗಿ ಯೋಚನೆ ಮಾಡಿ ಎಂದು ಟ್ವೀಟಿಗರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಕಾಂಗ್ರೆಸ್ ಟ್ವೀಟ್ ಡಿಲೀಟ್ ಮಾಡಿದ್ದು, ಮತ್ತೊಂದು ಟ್ವೀಟ್ ನಲ್ಲಿ ಭಾರತ ಸರ್ಕಾರ ಪ್ರಶಸ್ತಿ ನೀಡಿತ್ತು ಎಂದು ಸರಣಿ ಟ್ವೀಟ್ ಮಾಡಿದೆ. ಒಟ್ಟಾರೆ ನಟಿ ಶ್ರೀದೇವಿ ನಿಧನಕ್ಕೆ ಸಂತಾಪ ಸೂಚಿಸಿ ಕಾಂಗ್ರೆಸ್ ಪಕ್ಷ ಕೆಲ ಕ್ಷಣ ಪೇಚಿಗೆ ಸಿಲುಕಿತ್ತು.
क्रेडिट लेने का इतना शौक ? #Sridevi को तो बक्श देते !
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


