ದೇಶ

ನಾಗಾಲ್ಯಾಂಡ್‌ ಚುನಾವಣೆ: ಮಧ್ಯಾಹ್ನ 1 ಗಂಟೆ ವರೆಗೆ ಶೇ.56ರಷ್ಟು ಮತದಾನ, ಹಿಂಸಾಚಾರಕ್ಕೆ ಓರ್ವ ಬಲಿ

ನಾಗಾಲ್ಯಾಂಡ್‌ ವಿಧಾನಸಭೆಗೆ ಮಂಗಳವಾರ ಬೆಳಗ್ಗೆಯಿಂದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ....

ನಾಗಾಲ್ಯಾಂಡ್‌ ಚುನಾವಣೆ: ಮಧ್ಯಾಹ್ನ 1 ಗಂಟೆ ವರೆಗೆ ಶೇ.56ರಷ್ಟು ಮತದಾನ, ಹಿಂಸಾಚಾರಕ್ಕೆ ಓರ್ವ ಬಲಿ
ಮತಗಟ್ಟೆ ಬಳಿ ಮತದಾರರು
Published On :
ಕೊಹಿಮಾ: ನಾಗಾಲ್ಯಾಂಡ್‌ ವಿಧಾನಸಭೆಗೆ ಮಂಗಳವಾರ ಬೆಳಗ್ಗೆಯಿಂದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.56ರಷ್ಟು ಮತದಾನವಾಗಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಮತದನಾ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ನಡೆಯಲಿದೆ. ನಾಗಾಲ್ಯಾಂಡ್ ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ನಾಗಾಲ್ಯಾಂಡ್‌ನ‌ಲ್ಲಿ ಎನ್‌ಡಿಪಿಪಿ ಮುಖ್ಯಸ್ಥ ನೀಫಿಯು ರಿಯೋ ಅವರು 2ನೇ ಉತ್ತರ ಅಂಗಾಮಿ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು. 
ಬೆಳಗ್ಗೆ 9 ಗಂಟೆಯವರೆಗೆ ಶೇ.17ರಷ್ಟು ಮತದಾನವಾಗಿದ್ದು, ಆದರೆ 11 ಗಂಟೆಯ ವೇಳೆ ಮತದಾನ ಪ್ರಮಾಣ ಶೇ. 39ಕ್ಕೆ ಏರಿಕೆಯಾಗಿತ್ತು. 
ಈ ಮಧ್ಯೆ ಮೋನ್‌ ಜಿಲ್ಲೆಯ ತಿಜಿತ್‌ ಮತಗಟ್ಟೆ ಮೇಲೆ ದುಷ್ಕರ್ಮಿಗಳು ಬಾಂಬ್‌ ಎಸೆದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಝುನ್ಹೆಬೊಟ್ ಜಿಲ್ಲೆಯ ಎನ್ ಪಿಎಫ್ ಮತ್ತು ಎನ್ ಡಿಪಿಪಿ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಎರಡು ಪ್ರತ್ಯೇಕ ಘಟನೆಗಳನ್ನು ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿದೆ.
ಮೇಘಾಲಯ ಮತ್ತು ನಾಗಾಲ್ಯಾಂಡ್‌ ಜನರು ಹೆಚ್ಚಿನ ಸಂಖ್ಯೆಯಲ್ಲಿ  ಮತ ಚಲಾಯಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ವಿನಂತಿಸಿ ಟ್ವೀಟ್‌ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.