ದೇಶ

ಪೋಷಕರ ಜಗಳದಿಂದ ಬೇಸತ್ತ ಬಾಲಕಿ, ತಂದೆ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಕೇಸ್ ದಾಖಲು

ಲೈಂಗಿಕ ಕಿರುಕುಳಕ್ಕೆ ಒಳಗಾದರೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ತನ್ನ ಶಾಲೆಯಲ್ಲಿ....

ಪೋಷಕರ ಜಗಳದಿಂದ ಬೇಸತ್ತ ಬಾಲಕಿ, ತಂದೆ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಕೇಸ್ ದಾಖಲು
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಲೈಂಗಿಕ ಕಿರುಕುಳಕ್ಕೆ ಒಳಗಾದರೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ತನ್ನ ಶಾಲೆಯಲ್ಲಿ ನಡೆದ ಕಾರ್ಯಗಾರದಲ್ಲಿ ಕಲಿತಿದ್ದ ಬಾಲಕಿಯೊಬ್ಬಳು ತನ್ನನ್ನು ನಿಂದಿಸುತ್ತಿದ್ದ ತಂದೆಯ ವಿರುದ್ಧ ಕೇಸ್ ದಾಖಲಿಸಿ ಕೋರ್ಟ್ ನಿಂದ ನ್ಯಾಯ ಪಡೆದುಕೊಂಡಿದ್ದಾಳೆ.
ನಿತ್ಯ ಕುಡಿದು ಬಂದು ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನಿಂದಿಸುತ್ತಿದ್ದ ಹಾಗೂ ಹೊಡೆಯುತ್ತಿದ್ದ ತಂದೆಯ ವಿರುದ್ಧ ಹಲವು ಬಾರಿ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.  ಇದರಿಂದ ಆಕ್ರೋಶಗೊಂಡ  ಆತನ 17 ವರ್ಷದ ಪುತ್ರಿ ತಂದೆ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ್ದಳು.
ಪ್ರಕರಣದ ವಿಚಾರಣೆ ವೇಳೆ ಬಾಲಕಿ, ತಮಗೆ ನಿತ್ಯ ಹಿಂಸೆ ನೀಡುತ್ತಿದ್ದ ತಂದೆಯ ವಿರುದ್ಧ ಎಷ್ಟೇ ಬಾರಿ ದೂರು ನೀಡಿದರು ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೀತಿ ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ಒಪ್ಪಿಕೊಂಡಿದ್ದಾಳೆ. ಅಲ್ಲದೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಗಂಭೀರತೆ ಬಗ್ಗೆಯೂ ತಾನು ಶಾಲೆಯಲ್ಲಿ ನಡೆದ ಕಾರ್ಯಗಾರದಲ್ಲಿ ತಿಳಿದುಕೊಂಡಿರುವುದಾಗಿ ಹೇಳಿದ್ದಾಳೆ. ಬಾಲಕಿಯ ಧೈರ್ಯ ಮೆಚ್ಚಿದ ನ್ಯಾಯಮೂರ್ತಿ ಕಾವೇರಿ ಬವೇಜಾ ಅವರು, ಪತ್ನಿ ಮಕ್ಕಳಿಗೆ ಹಿಂಸೆ ನೀಡುತ್ತಿದ್ದ ತಂದೆಗೆ 25 ಸಾವಿರ ರುಪಾಯಿ ದಂಡ ವಿಧಿಸಿ, ಕುಟುಂಬದೊಂದಿಗೆ ಚೆನ್ನಾಗಿರುವಂತೆ ಸೂಚಿಸಿದ್ದಾರೆ. ಅಲ್ಲದೆ ತಪ್ಪಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.