ದೇಶ

ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯ ಮತದಾನ ಆರಂಭ

ತಲಾ 60 ಸ್ಥಾನಗಳನ್ನು ಹೊಂದಿರುವ ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ.

ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯ ಮತದಾನ ಆರಂಭ
ಶಿಲ್ಲಾಂಗ್ ನಲ್ಲಿ ಮತದಾನ
Published On :
ನವದೆಹಲಿ: ತಲಾ 60 ಸ್ಥಾನಗಳನ್ನು ಹೊಂದಿರುವ ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ತೀವ್ರ ಭದ್ರತೆಯಲ್ಲಿ ಮತದಾನವನ್ನು ನಡೆಸಲಾಗುತ್ತಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಸಾಲುಗಟ್ಟಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಶಿಲ್ಲಾಂಗ್ ನಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆಯಲ್ಲಿ ಮತದಾನಕ್ಕೆ ಕೊಂಚ ಅಡ್ಡಿಯಾಗಿತ್ತು. ಆದರೆ ಅಧಿಕಾರಿಗಳು ದೋಷ ಸರಿಪಡಿಸಿದ ಬಳಿಕ ಮತದಾನ ಮತ್ತ ಆರಂಭವಾಗಿದೆ. 
ಈ ಎರಡೂ ಪುಟ್ಟ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮಾರ್ಚ್ 3ರಂದು ತ್ರಿಪುರ ಸೇರಿದಂತೆ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.