ದೇಶ

ಮದುವೆ ಮನೆಯಲ್ಲಿ ಸಂಭ್ರಮಾಚರಣೆಯ ಫೈರಿಂಗ್: ಮದುಮಗ ಸಾವು

ಮದುವೆ ಮನೆಯಲ್ಲಿ ನಡೆದ ಶೂಟೌಟ್ ನಿಂದ ಮದುಮಗ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮದುವೆ ಮನೆಯಲ್ಲಿ ಸಂಭ್ರಮಾಚರಣೆಯ ಫೈರಿಂಗ್: ಮದುಮಗ ಸಾವು
ಶೂಟೌಟ್ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಮದುವೆ ಮನೆಯಲ್ಲಿ ಶೂಟೌಟ್ ನಡೆದು ಮದುಮಗ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

 ದೀಪಕ್ ಕುಮಾರ್ ಮೃತ ದುರ್ದೈವಿ. ಮದುವೆ ಸಂಭ್ರಮದಲ್ಲಿ ಸಂಬಂಧಿಕರೆಲ್ಲರೂ ನೃತ್ಯದಲ್ಲಿ ಮುಳಗಿದ್ದಾಗ ಅಪರಿಚಿತರು ಗುಂಡು ಹಾರಿಸಿದ್ದಾರೆ.

ಈ ಗುಂಡು ದಾರಿತಪ್ಪಿ ವರನಿಗೆ ತಟ್ಟಿದೆ. ತಕ್ಷಣ ಆತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಆದರೆ,ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ದೆಹಲಿ ಉಪ ಪೊಲೀಸ್ ಆಯುಕ್ತ ನಾಗ್ಪುರ್ ಪ್ರಸಾದ್ ತಿಳಿಸಿದ್ದಾರೆ.

ಗುಂಡು ಹಾರಿಸಿದದ್ದು ಯಾರು ಎಂಬುದನ್ನು ವಧುವಿನ ಕಡೆಯವರು ಪತ್ತೆ ಹಚ್ಚಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಇದು ಎಲ್ಲಿಂದ ಬಂತು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ  ಎಂದು ಅವರು ಹೇಳಿದ್ದಾರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.