ದೇಶ

ಕಾರ್ತಿ ಚಿದಂಬರಂ ತನಿಖೆಗೆ ಸಹಕರಿಸುತ್ತಿಲ್ಲ: ಕೋರ್ಟ್ ಗೆ ಸಿಬಿಐ

ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ

ಕಾರ್ತಿ ಚಿದಂಬರಂ ತನಿಖೆಗೆ ಸಹಕರಿಸುತ್ತಿಲ್ಲ: ಕೋರ್ಟ್ ಗೆ ಸಿಬಿಐ
ಕಾರ್ತಿ ಚಿದಂಬರಂ
Published On :
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು 15 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದೆ. 
ಪಟಿಯಾಲ ಕೋರ್ಟ್ ನಲ್ಲಿ ಕಾರ್ತಿ ಚಿದಂಬರಂ ಪರವಾಗಿ ಅಭಿಶೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದು, ಅಡ್ವಾನ್ಸ್ಡ್ ಸ್ಟ್ರಾಟಜಿಕ್ ಕನ್ಸಲ್ಟಿಂಗ್ ಲಿಮಿಟೆಡ್ ಗೂ ಕಾರ್ತಿ ಚಿದಂಬರಂ ಗೂ ಯಾವುದೇ ರೀತಿಯ ಸಂಬಂಧವಿಲ್ಲ ಪ್ರಕರಣಕ್ಕೆ ಸಂಬಂದ್ಖಿಸಿದಂತೆ ಇಡಿ ಹಾಗೂ ಸಿಬಿಐ ತನಿಖೆಗೆ ಯಾವಾಗಲೂ ಕಾರ್ತಿ ಚಿದಂಬರಂ ಸಹಕರಿಸಿದ್ದಾರೆ ಎಂದು ವಾದಿಸಿದ್ದಾರೆ. 
ಕಾರ್ತಿ ಚಿದಂಬರಂ ವಿರುದ್ಧ ಆರೋಪಿಸಿರುವ ಸಿಬಿಐ, ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಹೇಳಿದೆ.  ಅಷ್ಟೇ ಅಲ್ಲದೇ ಕಾರ್ತಿ ಚಿದಂಬರಂ ತಪ್ಪು ಹೇಳಿಕೆಗಳಿಂದ ತನಿಖೆಗೆ ಹಿನ್ನಡೆಯುಂಟಾಗುತ್ತಿದೆ ಎಂದು ಸಿಬಿಐ ಕೋರ್ಟ್ ಗೆ ತಿಳಿಸಿದ್ದು 15 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಬೇಕೆಂದು ಮನವಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.