ದೇಶ

ಪಿಎನ್ ಬಿ ವಂಚನೆ ಪ್ರಕರಣ: ತನಿಖೆಗೆ ಸಹಕರಿಸಲು ನೀರವ್ ಮೋದಿ ನಕಾರ-ಸಿಬಿಐ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪಿಎನ್ ಬಿ ವಂಚನೆ ಪ್ರಕರಣ: ತನಿಖೆಗೆ ಸಹಕರಿಸಲು ನೀರವ್ ಮೋದಿ ನಕಾರ-ಸಿಬಿಐ
ನೀರವ್ ಮೋದಿ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎದುರು ವಿಚಾರಣೆಗೆ ಹಾಜರಾಗುವಂತೆ ಇ-ಮೇಲ್ ಮೂಲಕ ತಿಳಿಸಲಾಗಿತ್ತು.

ಆದರೆ, ತಾನೂ ವ್ಯವಹಾರ  ದೃಷ್ಟಿಯಿಂದ ವಿದೇಶದಲ್ಲಿದ್ದು, ತನಿಖೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೀರವ್ ಮೋದಿ ಯಾವ ದೇಶದಲ್ಲಿದ್ದಾನೋ ಆ ದೇಶದಲ್ಲಿನ ಭಾರತೀಯ ರಾಯಬಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ನಿರ್ದೇಶಿಸಲಾಗಿದೆ.
ಆತಭಾರತಕ್ಕೆ ಮರಳಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.