ದೇಶ

ಕಾಶ್ಮೀರ: ಎಲ್ ಒಸಿ ಬಳಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ...

ಕಾಶ್ಮೀರ: ಎಲ್ ಒಸಿ ಬಳಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ
ಸಾಂದರ್ಭಿಕ ಚಿತ್ರ
Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ ಸೇನೆ ಬುಧವಾರ ರಾಜೋರಿ ಮತ್ತು ಜಮ್ಮು ಜಿಲ್ಲೆಯ ನೌಷೇರಾ ಹಾಗೂ ಖೋರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುತ್ತಿದೆ.
ಪಾಕ್ ಸೇನೆ ಇಂದು ಬೆಳಗ್ಗೆ 10.30ರಿಂದ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಪಾಕ್ ಸೇನೆ ಖೋರ್ ಸೆಕ್ಟರ್ ನ ಚಕ್ಲಾ ಮತ್ತು ಬಲ್ಡೊ ಪ್ರದೇಶದಲ್ಲೂ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ಹೇಳಿದ್ದಾರೆ. 
ನಿನ್ನೆ ಸಹ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್ ಸೇನೆ, ಪೂಂಚ್ ಮತ್ತು ರಾಜೋರಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ದಾಳಿಯಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಗಾಯಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.