ಕಂಚಿ ಶ್ರೀಗಳ ನಿಧನಕ್ಕೆ ಗಣ್ಯರಿಂದ ಸಂತಾಪ, ಇಲ್ಲಿದೆ ಶ್ರೀಗಳ ಹಿನ್ನೆಲೆ
ಕಂಚಿ ಕಾಮಕೋಟಿ ಶಂಕರ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಸ್ವಾಮಿಗಳು ವಿದೇಹ ಮುಕ್ತಿ ಪಡೆದಿದ್ದು, ಶ್ರೀಗಳ ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Published On :
ನವದೆಹಲಿ: ಕಂಚಿ ಕಾಮಕೋಟಿ ಶಂಕರ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಸ್ವಾಮಿಗಳು ವಿದೇಹ ಮುಕ್ತಿ ಪಡೆದಿದ್ದು, ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮನುಕುಲದ ಅಭಿವೃದ್ಧಿಗೆ ಹಾಗೂ ಆಧ್ಯಾತ್ಮದ ಪ್ರಚಾರಕ್ಕೆ ಅವರ ಕೊಡುಗೆ ಅನನ್ಯವಾದದ್ದು ಹಾಗೂ ಇತರರಿಗೆ ಸ್ಪೂರ್ತಿಯಾಗುವಂತಹದ್ದು, ಕಂಚಿ ಶ್ರೀಗಳಿಗೆ ನನ್ನ ಪ್ರಣಾಮಗಳು ಎಂದು ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಸಹ ಕಂಚಿ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದು, "ಕಂಚಿ ಮಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಶ್ರೀಗಳ ನಿಧನ ಆಘಾತ ಉಂಟುಮಾಡಿದೆ. ಬಡವರಿಗೆ ಉಚಿತ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯ ಕಲ್ಪಿಸಿದ ಅವರ ಸಾಮಾಜಿಕ ಕಾಳಜಿ ಅತ್ಯಮೂಲ್ಯ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
ಕಂಚಿ ಶ್ರೀಗಳ ಹಿನ್ನೆಲೆ
ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿ 1935 ರ ಜುಲೈ 18 ರಂದು ಜನಿಸಿದ್ದ ಜಯೇಂದ್ರ ಸರಸ್ವತಿಗಳ ಪೂರ್ವಾಶ್ರಮದ ಹೆಸರು ಸುಬ್ರಹ್ಮಣ್ಯಂ ಮಹಾದೇವ ಐಯ್ಯರ್ ಎಂದು. 19 ವರ್ಷದವರಿದ್ದಾಗಲೇ ಕಂಚಿಯ ಹಿಂದಿನ ಪೀಠಾಧಿಪತಿಗಳಾಗಿದ್ದ ಚಂದ್ರಶೇಖರೇಂದ್ರ ಸರಸ್ವತಿ ಸ್ವಾಮಿಗಳ ಉತ್ತರಾಧಿಕಾರಿಗಳಾಗಿ ಸನ್ಯಾಸ ಸ್ವೀಕರಿಸಿದ್ದರು. ಮೂಲತಃ ತಮಿಳುನಾಡಿನವರಾಗಿದ್ದರೂ ಬಹುಭಾಷಾ ಪಂಡಿತರಾಗಿದ್ದ ಜಯೇಂದ್ರ ಸರಸ್ವತಿ ಸ್ವಾಮಿಗಳು ಕನ್ನಡ ಭಾಷೆಯನ್ನೂ ನಿರರ್ಗಳವಾಗಿ ಮಾತನಾಡುತ್ತಿದ್ದರು.
1994 ರಲ್ಲಿ ಚಂದ್ರಶೇಖರೇಂದ್ರ ಸರಸ್ವತಿಗಳು ಇಹಲೋಕ ತ್ಯಜಿಸಿದ ನಂತರ ಜಯೇಂದ್ರ ಸರಸ್ವತಿ ಸ್ವಾಮಿಗಳು ಕಂಚಿ ಕಾಮಕೋಟಿ ಪೀಠಾಧಿಪತಿಗಳಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ 1987 ರಲ್ಲಿ ಹಿರಿಯ ಪೀಠಾಧಿಪತಿಗಳಾದ ಚಂದ್ರಶೇಖರೇಂದ್ರ ಸರಸ್ವತಿಗಳಿದ್ದಾಗಲೇ ಜಯೇಂದ್ರ ಸರಸ್ವತಿ ಸ್ವಾಮಿಗಳು ಮಠವನ್ನು ಬಿಟ್ಟು ಅಜ್ಞಾತ ವಾಸದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಚಂದ್ರಶೇಖರೇಂದ್ರ ಸರಸ್ವತಿಗಳಿದ್ದಾಗಲೇ ಜಯೇಂದ್ರ ಸರಸ್ವತಿಗಳ ಉತ್ತರಾಧಿಕಾರಿಯನ್ನಾಗಿ ವಿಜಯೇಂದ್ರ ಸರಸ್ವತಿಗಳನ್ನು ನೇಮಿಸಲಾಗಿತ್ತು. ಶ್ರೀಗಳು ಕೆಲವು ದಿನಗಳ ನಂತರ ಕರ್ನಾಟಕದ ತಲಕಾವೇರಿಯಲ್ಲಿ ಪತ್ತೆಯಾಗಿದ್ದರು. ಈ ಘಟನೆ ನಡೆದ ನಂತರದ ಕೆಲವು ವರ್ಷಗಳ ಅವಧಿಯಲ್ಲಿ ಕಂಚಿ ಕಾಮಕೋಟಿ ಮಠದಲ್ಲಿ ಮೂವರು ಪೀಠಾಧಿಪತಿಗಳಿದ್ದರು.
ರಾಜಕೀಯ ವಲಯದಲ್ಲಿಯೂ ಹೆಚ್ಚು ಪ್ರಭಾವ ಹೊಂದಿದ್ದ ಕಂಚಿ ಶ್ರೀಗಳು ತಮ್ಮ ಅವಧಿಯಲ್ಲಿ ಹಲವು ವಿದ್ಯಾಸಂಸ್ಥೆಗಳನ್ನು ಹಾಗೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದ್ದರು. ಮಾ.1 ರಂದು ಬೆಳಿಗ್ಗೆ 8 ರಿಂದ ಶ್ರೀಗಳ ಬೃಂದಾವನ ಪ್ರವೇಶ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಠದ ಟ್ವಿಟರ್ ಖಾತೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Jayendra SaraswathiKanchi seerVice President Naiduಕಂಚಿ ಕಾಮಕೋಠಿ ಶಂಕರ ಪೀಠಜಯೇಂದ್ರ ಸರಸ್ವತಿ ಸ್ವಾಮಿಗಳುಗಣ್ಯರ ಸಂತಾಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


